ಹಿರಿಯ ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ

ಕನ್ನಡ ಸಾಹಿತ್ಯದಲ್ಲಿ ಎನ್ನೆಸ್ಸೆಲ್,' ಎಂದೇ ಮನೆಮಾತಾಗಿರುವ 'ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ತಮ್ಮ 84ನೇ ವಯಸ್ಸಿನಲ್ಲಿ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

Last Updated : Mar 6, 2021, 11:05 AM IST
  • ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು (N. S. Lakshminarayan Bhat) 1936 ಅಕ್ಟೋಬರ 29 ರಂದು ಶಿವಮೊಗ್ಗೆಯಲ್ಲಿ ಹುಟ್ಟಿದರು.
  • ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಎಂ.ಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ತನ್ನಂತರ ಕಾಲೇಜಿನಲ್ಲಿ ಅಧ್ಯಾಪಕರಾದರು.
ಹಿರಿಯ ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ  title=
Photo Courtesy: Facebook

ಬೆಂಗಳೂರು: ಕನ್ನಡ ಸಾಹಿತ್ಯದಲ್ಲಿ ಎನ್ನೆಸ್ಸೆಲ್,' ಎಂದೇ ಮನೆಮಾತಾಗಿರುವ 'ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ತಮ್ಮ 84ನೇ ವಯಸ್ಸಿನಲ್ಲಿ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.ಈಗ ಬನಶಂಕರಿಯಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 11 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Madhu Bangarappa: ಜೆಡಿಎಸ್‌ ತೊರೆಯುವ ಸುಳಿವು ನೀಡಿದ ಮಧು ಬಂಗಾರಪ್ಪ..!?

ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು (N. S. Lakshminarayan Bhat) 1936 ಅಕ್ಟೋಬರ 29 ರಂದು ಶಿವಮೊಗ್ಗೆಯಲ್ಲಿ ಹುಟ್ಟಿದರು. ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಎಂ.ಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ತನ್ನಂತರ ಕಾಲೇಜಿನಲ್ಲಿ ಅಧ್ಯಾಪಕರಾದರು.

ಶಿವಮೊಗ್ಗದಲ್ಲಿ 'ಇಂಟರ್ ಮೀಡಿಯೆಟ್ ಮುಗಿಸಿ', ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿದರು. ಅಧ್ಯಯನದುದ್ದಕ್ಕೂ ಮೊದಲ ದರ್ಜೆಯಲ್ಲೇ ಉತ್ತೀರ್ಣರಾದರು. ತುಂಬಾ ಹರಟುವ ಸ್ವಭಾವ, ಸರಳ ಸಜ್ಜನಿಕೆ, ಅತ್ಯುತ್ತಮ ಸ್ಮರಣ ಶಕ್ತಿ, ಯನಂತರ, ತೀನಂಶ್ರೀ ಮಾರ್ಗದರ್ಶನದಲ್ಲಿ ಸಂಶೋಧನ ವೃತ್ತಿಯನ್ನು ಕೈಗೊಂಡರು. 1965 ರಲ್ಲಿ ಬೆಂಗಳೂರು ವಿಶ್ವವಿಧ್ಯಾಲಯವನ್ನು ಸೇರಿ, ಅಧ್ಯಾಪಕ,ರೀಡರ್, ಪ್ರಾಧ್ಯಾಪಕ, ನಿರ್ದೇಶಕ 1990 ರಲ್ಲಿ ಆರ್ಟ ಫ್ಯಾಕಲ್ಟಿ ಡೀನ್ ಆದರು.

ಇದನ್ನೂ ಓದಿ: ಕೃಷಿ ರಾಯಭಾರಿಯಾಗಿ ನಟ ದರ್ಶನ್ ಅಧಿಕಾರ ಸ್ವೀಕಾರ

'ಸುನೀತ' (ಶೇಕ್ಸಪಿಯರನ ಐವತ್ತು ಸಾನೆಟ್ಟುಗಳು)'ಚಿನ್ನದ ಹಕ್ಕಿ' ( ಯೇಟ್ಸ ಕವಿಯ ಐವತ್ತು ಕವನಗಳು) ’ಭಾರತೀಯ ಗ್ರಂಥ ಸಂಪಾದನಾ ಪರಿಚಯ’,’ವೆಂಬ ಅನುವಾದ ಗ್ರಂಥ ಇಂದಿಗೂ ಗ್ರಂಥ ಪಾಠ ಶೋಧನೆಯಲ್ಲಿ ನಿರತರಾದ ಸಂಶೋಧಕರಿಗೆ ಅತ್ಯಂತ ಉಪಯುಕ್ತವಾದ ಹೊತ್ತಿಗೆಯಾಗಿದೆ.

ಭಟ್ಟರ ಅತ್ಯಂತ ಸಮರ್ಥ ಅನುವಾದಗಳಲ್ಲಿ, ’ಯೇಟ್ಸ್’, ’ಶೇಕ್ಸ್ ಪಿಯರ್’, ’ಎಲಿಯಟ್’ ಕವಿಗಳ ತಮ್ಮ ಕೃತಿಗಳಿಗಾಗಿ ಮೂ ರುಬಾರಿ ಕರ್ನಾಟಕ ’ಸಾಹಿತ್ಯ ಅಕಾಡೆಮಿಯ ಬಹುಮಾನ’ಗಳನ್ನು ಗಳಿಸಿವೆ. 1990 ರಲ್ಲಿ ತಮ್ಮ ಸಮಗ್ರ ಸಾಹಿತ್ಯಕ್ಕೆ ’ಶಿವರಾಮಕಾರಂತ ಪ್ರಶಸ್ತಿ’ಯನ್ನು ಪಡೆದಿದ್ದಾರೆ. ’ರಾಜ್ಯೋತ್ಸವ ಪ್ರಶಸ್ತಿ’, ’ಮಾಸ್ತಿಪ್ರಶಸ್ತಿ’, ವರ್ಧಮಾನ ಪ್ರಶಸ್ತಿ’ಗಳಂತ ಹತ್ತು ಹನ್ನೆರಡು ಪ್ರಶಸ್ತಿಗಳು ಒಂದೊಂದಾಗಿ ಅವರ ಮಡಿಲು ಸೇರಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News