ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಐದನೇ ಬಾರಿ ಸ್ಥಾನ ಪಡೆದ ಕನ್ನಡಿಗ ವಿಜ್ಞಾನಿ ...!
ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿರುತ್ತಾರೆ
ಬೆಂಗಳೂರು: ಯು.ಎಸ್.ಎ.ಯ ಸ್ಟ್ಯಾನ್‍ಪೋರ್ಡ್ ವಿ.ವಿ. ಮತ್ತು ಎಲ್ಸ್‍ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥರವರು ಸತತ ಐದನೇ ಬಾರಿ ಸ್ಥಾನ ಪಡೆದಿರುತ್ತಾರೆ.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಡಿಕೇರಿ ಇಲ್ಲಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿರುತ್ತಾರೆ(ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).ಕಾಂಗ್ರೆಸ್ ಪ್ರಣಾಳಿಕೆ: ಬಡವರಿಗೆ ಡಬಲ್ ಬೆಡ್‌ರೂಂ ಮನೆ, ಉಚಿತ ವಿದ್ಯುತ್ & 25 ಲಕ್ಷದವರೆಗೆ ಉಚಿತ ಚಿಕಿತ್ಸೆ!
ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‍ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರತಂದಿರುತ್ತಾರೆ. 27 ಜರ್ನಲ್‍ಗಳಲ್ಲಿ ಎಡಿಟೋರಿಯಲ್ ಬೋರ್ಡ್‍ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‍ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ.
ಇವರ ಸಾಧನೆಯೂ ಫೀಲ್ಡ್‍ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ಹೆಮ್ಮೆ ತಂದಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಪತಿಯವರು, ಕುಲಸಚಿವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.