ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕಣ್ಣೂರು ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಐದು ಬೋಗಿಗಳು ಹಳಿತಪ್ಪಿವೆ. ಮಾಹಿತಿ ಪ್ರಕಾರ ತೋಪುರು ಸಿವಾರಿ ನಡುವೆ ಅಪಘಾತ ಸಂಭವಿಸಿದೆ. ಗುಡ್ಡದ ಬಂಡೆಗಳು ಬಿದ್ದಿದ್ದರಿಂದ ರೈಲಿನ ಐದು ಬೋಗಿಗಳು ಹಳಿತಪ್ಪಿವೆ ಎಂದು ಹೇಳಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.
ನೈಋತ್ಯ ರೈಲ್ವೆ ಪ್ರಕಾರ, ಶುಕ್ರವಾರ ಮುಂಜಾನೆ 3.50 ರ ಸುಮಾರಿಗೆ ಅಪಘಾತ ಸಂಭವಿಸಿದೆ. ತೊಪ್ಪೂರು-ಶಿವಡಿ ನಡುವೆ ಪರ್ವತದಿಂದ ಬಂಡೆಯೊಂದು ಬಿದ್ದಿದ್ದು, ಕಣ್ಣೂರು ಬೆಂಗಳೂರು ಎಕ್ಸ್‌ಪ್ರೆಸ್‌ನ 5 ಬೋಗಿಗಳು ಹಳಿತಪ್ಪಿವೆ. ರೈಲ್ವೆ ಇಲಾಖೆಯಿಂದ ಬಂದ ಮಾಹಿತಿಯ ಪ್ರಕಾರ, ಈ ರೈಲಿನಲ್ಲಿ ಒಟ್ಟು 2348 ಪ್ರಯಾಣಿಕರಿದ್ದರು. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.
Around 3.50 am today, 5 coaches of Kannur-Bengaluru Express derailed b/w Toppuru-Sivadi of Bengaluru Division, due sudden falling of boulders on the train. All 2348 passengers on board are safe, no casualty/injury reported: South Western Railway (SWR)
(Photo source: SWR) pic.twitter.com/Yq9hhxIkQo
— ANI (@ANI) November 12, 2021
ಇದನ್ನೂ ಓದಿ : PUC Admission 2021 : ರಾಜ್ಯದಲ್ಲಿ ಪ್ರಥಮ ಪಿಯುಸಿಗೆ 7.2 ಲಕ್ಷ ವಿದ್ಯಾರ್ಥಿಗಳು ದಾಖಲು : ಕಳೆದ ವರ್ಷಕ್ಕಿಂತ 92,000 ಹೆಚ್ಚು!
ಮಾಹಿತಿ ಪಡೆದ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹಳಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಈ ಮಾರ್ಗದಲ್ಲಿ ಬರುವ ರೈಲುಗಳನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ ಅಥವಾ ಬೇರೆಡೆಗೆ ತಿರುಗಿಸಲಾಗುತ್ತಿದೆ. ಹಳಿಯನ್ನು ದುರಸ್ತಿಗೊಳಿಸಿದ ನಂತರ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ಅನ್ನು ಮುಂದೆ ಕಳುಹಿಸಲಾಗುವುದು, ಆದರೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದರ ಕುರಿತು ಏನನ್ನೂ ಹೇಳಲಾಗುವುದಿಲ್ಲ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.