Siddaramaiah: ನೂರು ಕ್ಷೇತ್ರಗಳಲ್ಲಿ 'ಕಾಂಗ್ರೆಸ್ ಸಮಾವೇಶ' ನಡೆಸಲು ಮಹತ್ವದ ಸಭೆ..!

ಮೊದಲ ಹಂತದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಕಾಂಗ್ರೆಸ್ ಅಭ್ಯರ್ಥಿಗಳ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಲ್ಲಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

Last Updated : Feb 23, 2021, 04:57 PM IST
  • ಮಾರ್ಚ್ ಮೊದಲ ವಾರದಲ್ಲಿ ರಾಜ್ಯಾದ್ಯಂತ 100 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವ ಸಂಬಂಧಪಟ್ಟ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಮಾಲೋಚನೆ ನಡೆಸಿದರು.
  • ಮೊದಲ ಹಂತದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಕಾಂಗ್ರೆಸ್ ಅಭ್ಯರ್ಥಿಗಳ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಲ್ಲಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
  • ಬಹಳಷ್ಟು ಜಿಲ್ಲೆಗಳಲ್ಲಿ ಆಂತರಿಕ ಭಿನ್ನಮತಗಳಿದ್ದು , ಪರಸ್ಪರ ಗೊಂದಲದ ವಾತಾವರಣಗಳಿವೆ.
Siddaramaiah: ನೂರು ಕ್ಷೇತ್ರಗಳಲ್ಲಿ 'ಕಾಂಗ್ರೆಸ್ ಸಮಾವೇಶ' ನಡೆಸಲು ಮಹತ್ವದ ಸಭೆ..! title=

ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿ ರಾಜ್ಯಾದ್ಯಂತ 100 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವ ಸಂಬಂಧಪಟ್ಟ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಭೆ ಸೇರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ನಾಯಕ ರಮೇಶ್‍ಕುಮಾರ್, ಮಾಜಿ ಸಚಿವ ಕೃಷ್ಣ ಭೈರೇಗೌಡ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಸೇರಿದಂತೆ ಅನೇಕ ನಾಯಕರು ಪ್ರವಾಸ ಕಾರ್ಯಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ.

ಮೊದಲ ಹಂತದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಕಾಂಗ್ರೆಸ್(Congress) ಅಭ್ಯರ್ಥಿಗಳ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಲ್ಲಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಎರಡನೆ ಹಂತದಲ್ಲಿ ಹಾಲಿ ಶಾಸಕರ ಕ್ಷೇತ್ರಗಳಲ್ಲಿ ಬಹಿರಂಗ ಸಭೆಗಳನ್ನು ನಡೆಸಲಾಗುವುದು. ಇಂದು ನಡೆದ ಸಭೆಯಲ್ಲಿ ಪ್ರವಾಸದ ವೇಳೆ ಯಾವುದೇ ರೀತಿಯ ಭಿನ್ನಮತಗಳು ಕಾಣಿಸಿಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗಿದೆ.

Basavaraj Horatti: ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ!

ಬಹಳಷ್ಟು ಜಿಲ್ಲೆಗಳಲ್ಲಿ ಆಂತರಿಕ ಭಿನ್ನಮತಗಳಿದ್ದು, ಪರಸ್ಪರ ಗೊಂದಲದ ವಾತಾವರಣಗಳಿವೆ. ಹಿರಿಯ ನಾಯಕರ ಪ್ರವಾಸ ಅತ್ಯಂತ ಮಹತ್ವದ್ದಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆ(Election)ಗೆ ದಿಕ್ಸೂಚಿಯಾಗಬೇಕು. ಆದರೆ ಪ್ರವಾಸದ ಕಾರ್ಯಕ್ರಮಗಳಲ್ಲೇ ಅಸಮಾಧಾನಗಳು ವ್ಯಕ್ತವಾದರೆ ಅಪಶಕುನವಾದಂತಾಗುತ್ತದೆ. ಹಾಗಾಗಿ ಜಿಲ್ಲಾ ಮಟ್ಟದಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಬೇಕು. ಆಯಾ ಜಿಲ್ಲೆಗಳ ವೀಕ್ಷಕರಾಗಿರುವ ನಾಯಕರು ಮುಂಚಿತವಾಗಿ ಸ್ಥಳಗಳಿಗೆ ತೆರಳಿ ಚರ್ಚೆ ನಡೆಸಿ ಪಕ್ಷಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ಹಿರಿಯ ನಾಯಕರು ಸೂಚನೆ ನೀಡಿದ್ದಾರೆ.

Madhu Bangarappa: 'ಮಧು ಬಂಗಾರಪ್ಪಗೆ ಕಾಂಗ್ರೆಸ್‌ಗೆ ಸ್ವಾಗತ : ಆದ್ರೆ ಮತ್ತೋರ್ವಗೆ ಅವಕಾಶವಿಲ್ಲ'

ಇಂದು ಮೊದಲ ಹಂತದಲ್ಲಿ ಕೋಲಾರ ಜಿಲ್ಲೆಯ ನಾಯಕರ ಜತೆ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಪ್ರವಾಸದ ವೇಳೆ ಎಲ್ಲೆಲ್ಲಿ ಇಬ್ಬರು ಜತೆಯಾಗಿ ಹೋಗಬೇಕು. ಎಲ್ಲೆಲ್ಲಿ ಪ್ರತ್ಯೇಕವಾಗಿ ಹೋಗಬೇಕು. ಯಾವ ಸಮಸ್ಯೆಗಳನ್ನು ಚರ್ಚಿಸಬೇಕು. ರಾಜ್ಯ ಮಟ್ಟದ ಯಾವ ಸಮಸ್ಯೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಬೇಕು ಎಂಬ ವಿಷಯಗಳನ್ನು ಸಮಾಲೋಚನೆ ನಡೆಸಲಾಗಿದೆ.

Farmers Protest: ರೈತರಿಂದ ಫೆ.25ರಂದು ವಿಧಾನಸೌಧ ಚಲೋ ಚಳವಳಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News