ಬೆಂಗಳೂರು : ರಾಜ್ಯದಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಪಾಸ್ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದರು. ಇದರ ಬೆನ್ನಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿಯೇ ಪರೀಕ್ಷೆ ನಡೆಸುವಂತೆ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಮೂಲಕ ಆದೇಶಿಸಿ, ಈಗ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ.


COMMERCIAL BREAK
SCROLL TO CONTINUE READING

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿ(Department of Collegiate Education)ಯು ರಾಜ್ಯದ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಪರೀಕ್ಷೆ ನಡೆಸುವಂತೆ ಸೂಚಿಸಿದೆ.


ಇದನ್ನೂ ಓದಿ : New Guidelines : ರಾಜ್ಯ ಸರ್ಕಾರದಿಂದ 'ಅನ್ ಲಾಕ್' ಹೊಸ ಮಾರ್ಗಸೂಚಿ ಪ್ರಕಟ!


2 ವಿಷಯಗಳ ಮೂಲಕ ಪರೀಕ್ಷೆ ನಡೆಸಲು ಸೂಚಿಸಿರುವಂತ ಪಿಯು ಮಂಡಳಿಯು, ಆನ್ ಲೈನ್(Online Exam) ಮೂಲಕ ಪರೀಕ್ಷೆ ನಡೆಸಿ, ಅದರ ಆಧಾರದ ಮೇಲೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಕ್ಕೂ ಸೂಚಿಸಿದೆ. ಈ ಮೂಲಕ ಈ ಮೊದಲು ಪರೀಕ್ಷೆ ಇಲ್ಲದೇ ಪಾಸ್ ಎಂದು, ಈಗ ಆನ್ ಲೈನ್ ಮೂಲಕ ಪರೀಕ್ಷೆ ಎಂಬುದಾಗಿ ತಿಳಿಸಿ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಬಿಗ್ ಶಾಕ್ ನೀಡಿದೆ.


ಇದನ್ನೂ ಓದಿ : BS Yediyurappa : ಸಿಎಂ ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.