2nd PUC Result 2021 : ಇಂದು ದ್ವಿತೀಯ PU ಫಲಿತಾಂಶ ಪ್ರಕಟ : ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ ನೋಡಿ
ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ.
ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಇಂದು ಶಿಕ್ಷಣ ಸಚಿವ ಎಸ್ ಸುರೇಶ ಕುಮಾರ್ ಪ್ರಕಟಿಸಿದ್ದಾರೆ.
ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್(S Suresh Kumar) ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ.
ಇದನ್ನೂ ಓದಿ : ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸುರೇಶ್ ಕುಮಾರ್, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದೇ ವ್ಯವಸ್ಥಿತವಾಗಿ ಫಲಿತಾಂಶ ನೀಡಲಾಗುವುದು. ಈ ಬಾರಿ ಯಾವುದೇ ಶ್ರೇಯಾಂಕ ನೀಡುವುದಿಲ್ಲ. ಅಂಕಗಳ ಆಧಾರದ ಮೇಲೆಯೇ ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್‌ಎಲ್ ಸಿ(SSLC) ಹಾಗೂ ಪ್ರಥಮ ಪಿಯುಸಿ ಅಂಕ ಆಧರಿಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಪರೀಕ್ಷೆ ನಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಂದಣಿ ನಂಬರ್(Registration Number) ಸಿಕ್ಕಿಲ್ಲ. ಆದ್ದರಿಂದ ಫಲಿತಾಂಶ ನೋಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸ ರಿಜಿಸ್ಟರ್ ನಂಬರ್ ಜನರೇಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ವೆಬ್ ತಾಣದಲ್ಲಿ know your Number ಅಯ್ಕೆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ SMS ಮೂಲಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನೀಡಲಾಗುವುದು.
ಇದನ್ನೂ ಓದಿ : KRS ಗೋಡೆ ಕುಸಿತದ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತುವೆ: ಸುಮಲತಾ ಅಂಬರೀಶ್
ಆಯಾ ಕಾಲೇಜು(College)ಗಳಿಗೆ ಫಲಿತಾಂಶದ ವಿವರದ ಪಟ್ಟಿ ಹೋಗಲಿದೆ. ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಫಲಿತಾಂಶವನ್ನು ನೋಡಬಹುದಾಗಿದೆ. ವೆಬ್ಸೈಟ್ ವಿವರ: http://karresults.nic.in/
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ