ಬೆಂಗಳೂರು : ತಮಿಳುನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ರಾಜಧಾನಿ ಚೆನ್ನೈನ ಹಲವು ಭಾಗಗಳು ಮತ್ತು ಇತರ ಪ್ರದೇಶಗಳು ಇನ್ನೂ ಜಲಾವೃತವಾಗಿವೆ. ದಕ್ಷಿಣ ರಾಜ್ಯಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ತಜ್ಞರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಹೀಗಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. 


ಇದನ್ನೂ ಓದಿ : ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ


ಹಾಗೆ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್‌(Yellow Alert) ಘೋಷಿಸಲಾಗಿದೆ.


Heavy Rain)ಯಾಗುವ ಸಾಧ್ಯತೆಯಿದೆ ಮತ್ತು ಕೆಲವು ಬಾರಿ ಅತಿ ಹೆಚ್ಚು ಮಳೆಯಾಗುತ್ತದೆ ಎಂದು ಹೇಳಿದರು. 


ಆಡು, ಕುರಿ, ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆಗೆ ಉಚಿತ ತರಬೇತಿ ಶಿಬಿರ


ಭಾರೀ ಮಳೆ(Heavy Rain) ಮತ್ತು ಹವಾಮಾನ ವೈಪರೀತ್ಯದಿಂದಾಗಿ ನಿನ್ನೆ (ನವೆಂಬರ್ 11) ಐದು ಗಂಟೆಗಳಿಗೂ ಹೆಚ್ಚು ಕಾಲ ಚೆನ್ನೈ ವಿಮಾನ ನಿಲ್ದಾಣವನ್ನು ಸ್ಥಗಿತಗೊಳಿಸಲಾಯಿತು. "ತೀವ್ರ ಮಳೆ ಮತ್ತು ಭಾರೀ ಗಾಳಿಯಿಂದಾಗಿ, ಇಂದು 1315 ಗಂಟೆಗಳಿಂದ 1800 ಗಂಟೆಗಳವರೆಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮನವನ್ನು ಸ್ಥಗಿತಗೊಳಿಸಲಾಗುತ್ತದೆ. ನಿರ್ಗಮನ ಮುಂದುವರಿಯುತ್ತದೆ" ಎಂದು ಚೆನ್ನೈ ವಿಮಾನ ನಿಲ್ದಾಣ ಪ್ರಕಟಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.