ಬೆಂಗಳೂರು: ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ (ರೂ 85 ಲಕ್ಷ ಕೋಟಿ) ಆರ್ಥಿಕತೆಯಾಗಿ ಬೆಳೆಸುವ ಗುರಿಯೊಂದಿಗೆ ಉದ್ಯಮ ಪರಿಣತರ ಅಭಿಪ್ರಾಯ ಆಧರಿಸಿ 2025-30ರ ಅವಧಿಗೆ ಪ್ರಗತಿ ಕೇಂದ್ರಿತ ಕೈಗಾರಿಕಾ ನೀತಿ ರೂಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದರು.


COMMERCIAL BREAK
SCROLL TO CONTINUE READING

ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಆಮ್ ಚಾಮ್) ಇಲ್ಲಿ‌ನ ಹೋಟೆಲ್ ನಲ್ಲಿ ಏರ್ಪಡಿಸಿದ್ದ "ಪರಿವರ್ತನೆಯಾಗುತ್ತಿರುವ ಕರ್ನಾಟಕ" ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಇದನ್ನೂ ಓದಿ: Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!


ಅಗತ್ಯಕ್ಕೆ ತಕ್ಕಂತೆ ಆಗಾಗ್ಗೆ ತಿದ್ದುಪಡಿಗೆ ಅವಕಾಶ ಇರುವ ಹಾಗೆ ನೀತಿ ರೂಪಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ವಲಯಗಳ ಉದ್ದಿಮೆದಾರರು ನೀತಿ ರೂಪಿಸುವಲ್ಲಿ ಸಹಕರಿಸಬೇಕು. ಎಲ್ಲಾ ಹಿತಾಸಕ್ತಿದಾರರೊಂದಿಗೆ ಸಮಾಲೋಚನೆ ನಡೆಸಿ ಮುಂದುವರಿಸಲಾಗುವುದು ಎಂದು ಸಚಿವರು ಹೇಳಿದರು.


ಆರ್ಥಿಕತೆಯ ಗುರಿಗೆ ಅನುಗುಣವಾಗಿ ಹೆಚ್ಚಿನ ಸಹಭಾಗಿತ್ವಗಳನ್ನು ಸಾಧಿಸಲಾಗುವುದು. ಜೊತೆಗೆ, ಮೂಲಸೌಕರ್ಯ, ಕೌಶಲಾಭಿವೃದ್ಧಿ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿನ ಕೊರತೆಗಳನ್ನು ನಿವಾರಿಸಲು ಒತ್ತು ನೀಡಲಾಗುವುದು ಎಂದರು.


ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ


ಹೊಸದಾಗಿ ಸ್ಥಾಪನೆಯಾಗುತ್ತಿರುವ ಉದ್ದಿಮೆಗಳ ಬೇಡಿಕೆಗಳನ್ನು ಈಡೇರಿಸಲು ನಮ್ಮ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲು ಗಮನ ಕೇಂದ್ರೀಕರಿಸಲಾಗುವುದು. ಸರ್ಕಾರಿ ಸಂಸ್ಥೆಗಳ ನೆರವಿನಿಂದ ಸಮಗ್ರ ಕೌಶಲ ಕೊರತೆ ಅಧ್ಯಯನ ಕೈಗೊಳ್ಳಲಾಗುವುದು. ಈ ಮೂಲಕ, ಪ್ರಸ್ತುತ ಇರುವ ಕೌಶಲಗಳು ಯಾವುವು ಹಾಗೂ ಉದ್ದಿಮೆಗಳಿಗೆ ಅಗತ್ಯವಿರುವ ಕೌಶಲಗಳು ಯಾವುವು ಎಂಬುದನ್ನು ಗುರುತಿಸಲಾಗುವುದು. ಇದನ್ನು ಆಧರಿಸಿ ಗುರಿ ಕೇಂದ್ರಿತ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದರು. 


ಕೇವಲ ಆರ್ಥಿಕ ಬೆಳವಣಿಗೆ‌ ಮಾತ್ರವಲ್ಲದೆ ನಮ್ಮ ವಿವಿಧ ಸಮುದಾಯಗಳ ಜನರನ್ನು ಮೇಲೆತ್ತುವಂತಹ ಅವಕಾಶಗಳ ಸೃಷ್ಟಿಗೆ ಸರಕಾರ ಆದ್ಯತೆ ನೀಡಲಿದೆ. ಯುವ ಜನತೆಯ ಸಬಲೀಕರಣದ ಮೂಲಕ ರಾಜ್ಯದಲ್ಲಿ ಎಲ್ಲರನ್ನೂ ಒಳಗೊಳ್ಳುವಂತಹ ಪ್ರಗತಿ ಸಾಧಿಸುವುದು ನಮ್ಮ ಉದ್ದೇಶವಾಗಿದೆ. ಉದ್ಯಮದ ನಿರೀಕ್ಷೆ ಹಾಗೂ ನಾಗರಿಕರ ನಿರೀಕ್ಷೆ‌ ಇವೆರಡಕ್ಕೂ ಸರಿಹೊಂದುವಂತಹ ಪರಿಸರ ಸೃಷ್ಟಿಸಲಾಗುವುದು ಎಂದು ಪಾಟೀಲ ನುಡಿದರು.


ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಆಮ್ ಚಾಮ್) ರಂಜನಾ ಖನ್ನಾ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎನ್.ಸೆಲ್ವಕುಮಾರ್ ಸೇರಿದಂತೆ ವಿವಿಧ ಉದ್ಯಮಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಇದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.