Indira Canteen : ರಾಜ್ಯದ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ..!
ಇಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ
ಬೆಂಗಳೂರು : ಮೇ 24 ರವರೆಗೆ ರಾಜ್ಯದ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಬಡವರಿಗೆ ಮತ್ತು ಕಾರ್ಮಿಕರಿಗೆ ಉಚಿತ ಊಟ ನೀಡಲು ರಾಜ್ಯ ಸರ್ಕಾರ ಆದೇಶ ನೀಡಿದೆ.
ಇಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್(Indira Canteen) ಗಳಲ್ಲಿ ನೀಡುತ್ತಿದ್ದ ಊಟದ ವ್ಯವಸ್ಥೆಯನ್ನ ಸರ್ಕಾರ ನಿಷೇದಿಸಿತ್ತು, ಆ ಹಣವನ್ನ ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳುತ್ತಿತ್ತು. ಸಧ್ಯ ಲಾಕ್ ಡೌನ್ ಹಿನ್ನೆಲೆ ಕೆಲವರು ಊಟಕ್ಕೆ ಪರದಾಡುತ್ತಿದ್ದಾರೆ.
ಇದನ್ನೂ ಓದಿ : Oxygen Express Train : ಬೆಂಗಳೂರು ತಲುಪಿದ ಕೇಂದ್ರದ 120 ಟನ್ ಆಕ್ಸಿಜನ್ ಹೊತ್ತ ವಿಶೇಷ ರೈಲು..!
ಕಳೆದು 24 ಗಂಟೆಗಳಲ್ಲಿ ರಾಜ್ಯದಲ್ಲಿ 39305 ಕೊರೋನಾ(Corona) ಪ್ರಕರಣಗಳು ಕಂಡುಬಂದಿವೆ. ಮತ್ತೆ 596 ಜನ ಸಾವನ್ನಪ್ಪಿದ್ದಾರೆ. ಅಲ್ಲದೆ, 32188 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಧ್ಯ ರಾಜ್ಯದಲ್ಲಿ ಒಟ್ಟು 571006 ಆಕ್ಟಿವ್ ಕೊರೋನಾ ಪ್ರಕರಣಗಳಿವೆ.
ಇದನ್ನೂ ಓದಿ : Ravi D Channannavar : SP ರವಿ ಡಿ ಚೆನ್ನಣ್ಣನವರಿಗೆ ಕೊರೋನಾ ಪಾಸಿಟಿವ್..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.