Karnataka Assembly Bypolls Results 2021: ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ  ರಮೇಶ್ ಭೂಸನೂರಗೆ ಗೆಲುವು ಸಾಧಿಸಿದ್ದಾರೆ. BJP ಅಭ್ಯರ್ಥಿ ಸುಮಾರು 31,185 ಮತಗಳಿಂದ ಗೆಲುವು ಸಾಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅಂತ ಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಬಿಜೆಪಿ (BJP) ಅಭ್ಯರ್ಥಿ ರಮೇಶ್ ಭೂಸನೂರ 93,865 ಮತಗಳನ್ನು ಪಡೆದಿದ್ದಾರೆ. ಇನ್ನು ಕಾಂಗ್ರೆಸ್ (Congress) ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತಗಳಿಗೆ ತೃಪ್ತಿ ಪಡಬೇಕಾಯಿತು. 


ಬಿಜೆಪಿ ಅಭ್ಯರ್ಥಿ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. 


ಇದನ್ನೂ ಓದಿ : ಧಾರವಾಡವು ಕರ್ನಾಟಕ ಏಕೀಕರಣ ಚಳುವಳಿಯ ಜನ್ಮಭೂಮಿ-ಸಚಿವ ಶಂಕರ ಪಾಟೀಲ ಮುನೇನಕೊಪ್ಪ


ಇನ್ನು ಹಾನಗಲ್ ಕ್ಷೇತ್ರದ ಮತ ಎಣಿಕೆ ಇನ್ನು ಕೂಡಾ ಮುಂದುವರೆದಿದ್ದು, ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಆರಂಭ ದಿಂದಲೂ ಕಾಂಗ್ರೆಸ್ ಅಭ್ಯರ್ಥಿ  ಶ್ರೀನಿವಾಸ್ ಮಾನೆ (Srinivas mane) ಮುನ್ನಡೆಯಲ್ಲಿದ್ದಾರೆ. ಹಾನಗಲ್‍ನಲ್ಲಿ  ಬಿಜೆಪಿಯಿಂದ ವಿಧಾನಪರಿಷತ್ ಮಾಜಿ ಸದಸ್ಯ ಶಿವರಾಜ ಶರಣಪ್ಪ ಸಜ್ಜನರ್ (Shivaraj sharanappa Sajjanar) , ಕಾಂಗ್ರೆಸ್‍ನಿಂದ ಶ್ರೀನಿವಾಸ್ ಮಾನೆ ಮತ್ತು ಜೆಡಿಎಸ್‍ನಿಂದ ನಿಯಾಜ್ ಶೇಖ್ ಸೇರಿದಂತೆ 13 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. 


 ಬೆಳಿಗ್ಗೆ 8 ಗಂತೆಯಿಂದ ಮತ ಎಣಿಕೆ (Counting) ಕಾರ್ಯ ನಡೆಯುತ್ತಿದೆ. ಈ ಅದೃಷ್ಟ ಪರೀಕ್ಷೆಯಲ್ಲಿ ಗೆಲುವು ಯಾರದ್ದು  ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ : ಕನ್ನಡ ರಾಜ್ಯೋತ್ಸವ: ನಾಗರಿಕರ ಮನೆ ಬಾಗಿಲಿಗೇ ಸರ್ಕಾರದ ಸೇವೆಗಳು; `ಜನಸೇವಕ' ಯೋಜನೆಗೆ ಇಂದು ಸಿಎಂ ಚಾಲನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ