ನವದೆಹಲಿ: ಹಲವು ದಿನಗಳ ತೀವ್ರ ಚರ್ಚೆಯ ನಂತರ ಬಿಜೆಪಿ ಮಂಗಳವಾರ ಅಂತಿಮವಾಗಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

189 ಅಭ್ಯರ್ಥಿಗಳ ಪೈಕಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಒಬಿಸಿ ಸಮುದಾಯದ 32, ಎಸ್‌ಸಿಯಿಂದ 30 ಮತ್ತು ಎಸ್‌ಟಿ ಸಮುದಾಯದ 16 ಅಭ್ಯರ್ಥಿಗಳು ಸೇರಿದ್ದಾರೆ. ಪಟ್ಟಿಯಲ್ಲಿ 31 ಪಿಎಚ್‌ಡಿ ಹೊಂದಿರುವವರು ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ 31 ಅಭ್ಯರ್ಥಿಗಳು ಇದ್ದಾರೆ.ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ  ಸಿಎಂ ಬೊಮ್ಮಾಯಿ ಟ್ವಿಟ್ಟರ್ ನಲ್ಲಿ ಹೇಳಿಕೆ ನೀಡಿದ್ದು, ನವ ಕರ್ನಾಟಕದದಿಂದ ನವ ಭಾರತವನ್ನು ನಿರ್ಮಿಸಲು ಮತ್ತು ಸಮಗ್ರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿಯ 189 ಸಮರ್ಥ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯದೆಲ್ಲೆಡೆ ಡಬಲ್ ಇಂಜಿನ್ ಸರ್ಕಾರದ ಆಡಳಿತದ ಪರವಾದ ವಾತಾವರಣವಿದ್ದು, ಈ ಬಾರಿ ಸಂಪೂರ್ಣ ಬಹುಮತದ ಸರ್ಕಾರವನ್ನು ನಾವು ರಚಿಸಲಿದ್ದೇವೆ. ಎಂದು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.