ಬೆಂಗಳೂರು: ಮುಂದೊಂದು ದಿನ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ದಿನಗಳು ಬರುತ್ತವೆ ಎಂದು ಹೇಳಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನ ಮಂಡಲ ಅಧಿವೇಶನದ(Assembly Session) 2ನೇ ದಿನವಾದ ಬುಧವಾರ ಮಾತನಾಡಿದ ಸಿದ್ದರಾಮಯ್ಯನವರು, ‘ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ಹೇಳಿಕೆ ನೀಡುವ ಮೂಲಕ ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ(National Flag) ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತಾ ಆಗ್ರಹಿಸಿದರು.
ಇದನ್ನೂ ಓದಿ: Rape Case: ಅಪ್ರಾಪ್ತೆಯ ಅತ್ಯಾಚಾರ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ
Karnataka Minister KS Eshwarappa recently said: "We will hoist a saffron flag at Red Fort". The chief minister should sack him from the Cabinet. He has no right to continue as minister after this statement: LoP Siddaramaiah pic.twitter.com/tXKtWfzR6J
— ANI (@ANI) February 16, 2022
‘ಒಬ್ಬ ಮಂತ್ರಿನೇ ರಾಷ್ಟ್ರಧ್ವಜಕ್ಕೆ ಗೌರವ ಕೊಡದಿದ್ದರೆ, ಅದನ್ನು ಅಗೌರವದಿಂದ ಕಾಣುವುದಾದರೆ ಕೆ.ಎಸ್.ಈಶ್ವರಪ್ಪ(KS Eshwarappa) ಸಚಿವ ಸ್ಥಾನದಲ್ಲಿ ಹೇಗೆ ಮುಂದುವರಿಯಬೇಕು? ನನ್ನ ಪ್ರಕಾರ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಡಿಸ್ ಮಿಸ್ ಮಾಡಬೇಕು. ಬಿಜೆಪಿಯವರಿಗೆ ರಾಷ್ಟ್ರಧ್ವಜದ ಮೇಲೆ ಗೌರವ ಇದೆಯೋ ಇಲ್ಲವೋ..? ಅಂತಾ ಪ್ರಶ್ನಿಸಿ ಸಿದ್ದರಾಮಯ್ಯ ಕಿಡಿಕಾರಿದರು.
ಸಚಿವ ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಕೂಡ(Karnataka Assembly Session) ಸಿದ್ದರಾಮಯ್ಯರ ಜೊತೆಗೆ ಧ್ವನಿಗೂಡಿಸಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಈಶ್ವರಪ್ಪ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲವೆಂದು ಇದೇ ವೇಳೆ ಸಿದ್ದರಾಮಯ್ಯ ಪ್ರಶ್ನಿಸಿದರು.
ಇದನ್ನೂ ಓದಿ: Hijab Controversy: ಅಲ್ಪಸಂಖ್ಯಾತ ಸಮುದಾಯದ ಪರ ಕೈ ಬ್ಯಾಟಿಂಗ್!
ಕೆ.ಎಸ್.ಈಶ್ವರಪ್ಪ ಹೇಳಿದ್ದಾದರೂ ಏನು..?
ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ(National Flag) ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇವತ್ತಲ್ಲ ನಾಳೆ ಕೆಂಪುಕೋಟೆ(Red Fort) ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.