Recruitment 2021: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ (Karnataka Assistant Professor Recruitment 2021) ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ NET, KSET ಹಾಗೂ Phd ಮುಗಿಸಿರಬೇಕು.

Written by - Zee Kannada News Desk | Last Updated : Oct 21, 2021, 12:10 PM IST
  • ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
  • ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಅರ್ಹತಾ ಮಾನದಂಡ
  • ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿ ತಿಳಿಯಿರಿ
Recruitment 2021: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ title=
Karnataka Assistant Professor Jobs

ಬೆಂಗಳೂರು:  ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆ ಹೆಸರು: ಸಹಾಯಕ ಪ್ರಾಧ್ಯಾಪಕರು (Assistant Professor)

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 1242 ಹುದ್ದೆಗಳು

ಉದ್ಯೋಗ ಸ್ಥಳ: ಕರ್ನಾಟಕ

ಅನ್ವಯಿಸುವ ವಿಧಾನ: ಆನ್‌ಲೈನ್

ಅಧಿಕೃತ ವೆಬ್‌ಸೈಟ್: https://cetonline.karnataka.gov.in/kea

ಇದನ್ನೂ ಓದಿ- ರೈತನ ಮಗನಿಗೆ ಒಲಿದ ಚಿನ್ನದ ಪದಕ..!

ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಅರ್ಹತಾ ಮಾನದಂಡ:-

ಶೈಕ್ಷಣಿಕ ಅರ್ಹತೆ:
ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ (Karnataka Assistant Professor Recruitment 2021) ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ NET, KSET ಹಾಗೂ Phd ಮುಗಿಸಿರಬೇಕು.

ವಯಸ್ಸಿನ ಮಾನದಂಡ:
ಕನಿಷ್ಠ 22 ವರ್ಷಗಳ ನಂತರ ಹಾಗೂ ಗರಿಷ್ಠ 40 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಪ್ರವರ್ಗ 2ಎ, ಪ್ರವರ್ಗ 2ಬಿ ಹಾಗೂ ಪ್ರವರ್ಗ 3ಎ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶುಲ್ಕ ವಿವರ:
* ಸಾಮಾನ್ಯ ವರ್ಗ ಮತ್ತು ಇತರ ಪ್ರವರ್ಗದ ಅಭ್ಯರ್ಥಿಗಳಿಗೆ ಶುಲ್ಕ = 2,000ರೂ. 
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ = 1,000 ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಅಕ್ಟೋಬರ್ 31, 2021

ಇದನ್ನೂ ಓದಿ- Gita Gopinath To Leave IMF: IMF ನೌಕರಿಯನ್ನು ತೊರೆಯಲಿದ್ದಾರೆಯೇ ಗೀತಾ ಗೋಪಿನಾಥ್? ಅವರ ಮುಂದಿನ ಯೋಜನೆ ಏನು?

ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ:

ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021 ಫಾರ್ಮ್ ಕರ್ನಾಟಕ ಅರ್ಜಿದಾರರ ಸುಧಾರಣಾ ಮಂಡಳಿಯಿಂದ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಗೆ ಭೇಟಿ ನೀಡುವ ಮೂಲಕ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಸಹಾಯಕ ಪ್ರಾಧ್ಯಾಪಕರ ಅಧಿಸೂಚನೆಯನ್ನು ತಪ್ಪದೇ ಓದಿ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://kea.kar,nic.in ಗೆ ಭೇಟಿ ನೀಡಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News