ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ಖಂಡಿಸಿ ಕಂದಪರ ಸಂಘಟನೆಗಳು ಫೆಬ್ರವರಿ 19ರಂದು ಕರ್ನಾಟಕ ಬಂದ್ ಆಚರಿಸಲು ಕರೆ ನೀಡಿವೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್, ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪುಲ್ವಾಮ ಭಯೋತ್ಪಾದಕರ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್ ಮಾಡಲಾಗುವುದು. ಬೀದರ್ ನಿಂದ ಬೆಂಗಳೂರಿನವರೆಗೆ, ಕೋಲಾರದಿಂದ ಮಂಗಳೂರಿನವರೆಗೆ ರಾಜ್ಯದ ಎಲ್ಲಾ ಮೂಲೆಗಳಲ್ಲಿ ಬಂದ್ ಆಚರಿಸಬೇಕು ಎಂದು ವಾಟಾಳ್ ಕರೆ ನೀಡಿದರು.


ಮುಂದುವರೆದು ಮಾತನಾಡಿದ ಅವರು, ಫೆಬ್ರವರಿ 19ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ಹೊರಟು ಉಗ್ರರ ದಾಳಿಯನ್ನು ಖಂಡಿಸಲಾಗುವುದು. ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಚಾಲ್ತಿಯಲ್ಲಿರಲಿದ್ದು, ಆಸ್ಪತ್ರೆ ಮತ್ತು ಔಷಧಿ ಕೇಂದ್ರಗಳನ್ನು ಹೊರತುಪಡಿಸಿ ಬಸ್ ಸೌಲಭ್ಯ, ಖಾಸಗಿ ವಾಹನಗಳು, ಸಿನಿಮಾ, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಬಿಬಿಎಂಪಿ, ಅಂತಾರಾಷ್ಟ್ರೀಯ ಕಂಪನಿಗಳೂ ಸೇರಿದಂತೆ ಎಲ್ಲಾ ಸಂಸ್ಥೆಗಳು ಬಂದ್ ಆಚರಣೆ ಬೆಂಬಲಿಸುವಂತೆ ವಾಟಾಳ್ ಮನವಿ ಮಾಡಿದರು.