ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಏಪ್ರಿಲ್ 12ರ ಕರ್ನಾಟಕ ಬಂದ್ ಅನ್ನು ಹಿಂಪಡೆಯಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ತಮಿಳುನಾಡು ಮೊದಲಿನಿಂದಲೂ ಅನಗತ್ಯವಾಗಿ ರಾಜ್ಯಕ್ಕೆ ತೊಂದರೆ ನೀಡುತ್ತಾ ಬಂದಿದ್ದು, ಇದೀಗ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಡ ಹೇರುತ್ತಿರುವುದು ಸರಿಯಾದ ಕ್ರಮವಲ್ಲ. ಸುಪ್ರೀಂ ಕೋರ್ಟ್‌ ನಿರ್ವಹಣಾ ಮಂಡಳಿಯ ರಚನೆ ವಿಚಾರವನ್ನು ಪ್ರಸ್ತಾಪಿಸಿಲ್ಲ. ಹೀಗಾಗಿ ಬಂದ್‌ ಹಿಂಪಡೆಯಲಾಗಿದೆ. ಏಪ್ರಿಲ್ 12ರಂದು ಕರ್ನಾಟಕ ಬಂದ್ ಆಚರಣೆಗೆ ಬದಲಾಗಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕನ್ನಡಪರ ಸಂಘಟನೆಗಳು ನಿರ್ಧರಿಸಿರುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.