ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ಯಾತ್ರಾರ್ಥಿಗಳಿಗೆ ಕಾಶಿಯಲ್ಲಿ ಸಚಿವೆ ಜೊಲ್ಲೆ ಸ್ವಾಗತ
ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿನ ಮೊದಲ ಟ್ರಿಪ್ ನ ಯಾತ್ರಾರ್ಥಿಗಳನ್ನು ಹೊತ್ತಂತಹ ರೈಲು ಇಂದು ವಾರಣಾಸಿ ಗೆ ಬಂದು ತಲುಪಿತು. ಪ್ರಥಮ ಟ್ರಿಪ್ ನ ಯಾತ್ರಾರ್ಥಿಗಳು ತಮ್ಮನ್ನು ಸ್ವಾಗತಿಸಲು ಆಗಮಿಸಿದ್ದ ಸಚಿವರನ್ನು ಕಂಡು ಸಂತಸಗೊಂಡರು.
ವಾರಣಾಸಿ: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿನ ಮೊದಲ ಟ್ರಿಪ್ ನ ಯಾತ್ರಾರ್ಥಿಗಳನ್ನು ಹೊತ್ತಂತಹ ರೈಲು ಇಂದು ವಾರಣಾಸಿ ಗೆ ಬಂದು ತಲುಪಿತು. ಬನಾರಸ್ ರೈಲು ನಿಲ್ದಾಣದಲ್ಲಿ ಯಾತ್ರಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಶ್ರೀಮತಿ ಶಶಿಕಲಾ ಜೊಲ್ಲೆ ಬನಾರಸ್ ನಲ್ಲಿ ಕೋರಿದರು.
ಇದನ್ನೂ ಓದಿ : ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ 2ನೇ ಸ್ಥಾನದಲ್ಲಿ ಕರ್ನಾಟಕ
ಪ್ರಥಮ ಟ್ರಿಪ್ ನ ಯಾತ್ರಾರ್ಥಿಗಳು ತಮ್ಮನ್ನು ಸ್ವಾಗತಿಸಲು ಆಗಮಿಸಿದ್ದ ಸಚಿವರನ್ನು ಕಂಡು ಸಂತಸಗೊಂಡರು. ರೈಲು ಪ್ರಯಾಣ ದಲ್ಲಿ ಅವರಿಗೆ ಸಿಕ್ಕಂತಹ ಅತಿಥ್ಯದ ಬಗ್ಗೆ ಸಚಿವ ರಿಗೆ ಮಾಹಿತಿ ನೀಡಿದರು.
ಎರಡು ದಿನಗಳ ಕಾಲ ವಾರಣಾಸಿ ಯಲ್ಲಿ ವಾಸ್ತವ್ಯ ಹೂಡಲಿರುವ ಯಾತ್ರಾರ್ಥಿಗಳು ನಂತರ ಪ್ರಯಾಗರಾಜ್ ಮತ್ತು ಅಯೋಧ್ಯೆ ಗೆ ಭೇಟಿ ನೀಡಿ ನಂತರ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.
ಇದನ್ನೂ ಓದಿ : 'ಹಠದಿಂದ ಸ್ವಂತ ಜಾಗದಲ್ಲಿ ಟಿಪ್ಪು ಪ್ರತಿಮೆ ಕಟ್ಟುತ್ತೀವಿ ಅಂದ್ರೂ ಬಿಡಲ್ಲ'
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.