ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ!: ನದಿಗೆ ಇಳಿಯುವಾಗ ಜಾರಿಬಿದ್ದ ಡಿಕೆಶಿ ಟ್ರೋಲ್ ಮಾಡಿದ ಬಿಜೆಪಿ
#ಸುಳ್ಳಿನಜಾತ್ರೆ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿ.ಕೆ.ಶಿವಕುಮಾರ್ ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಎಂದು ಬರೆದು ಅಣಕವಾಡಿದೆ.
ಬೆಂಗಳೂರು: ಮೇಕೆದಾಟು ಯೋಜನೆ(Mekedatu Project)ಗೆ ಆಗ್ರಹಿಸಿ ಕಾಂಗ್ರೆಸ್ ಇಂದಿನಿಂದ (ಜ.9) ಪಾದಯಾತ್ರೆ ಹಮ್ಮಿಕೊಂಡಿದೆ. ಬಿಜೆಪಿ ಸರ್ಕಾರದ ವಿರೋಧದ ಮಧ್ಯೆಯೂ ನಾವು ಪಾದಯಾತ್ರೆ ಮಾಡಿಯೇ ಸಿದ್ಧವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಶುರು ಮಾಡಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ: ಮೊದಲ ದಿನವೇ ಸುಸ್ತಾಗಿ ಕಾರು ಹತ್ತಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ತೆಪ್ಪದಿಂದ ಇಳಿದ ಡಿಕೆಶಿ ನದಿಗೆ ಪೂಜೆ ಸಮರ್ಪಿಸಲು ಮುಂದಾಗುತ್ತಿದ್ದ ವೇಳೆ ವಾಲಿದ್ದಾರೆ. ನದಿ ದಂಡೆ ಪಕ್ಕ ಕುಳಿತು ಪೂಜೆ ಸಮರ್ಪನೆ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ದೃಶ್ಯ ಮಾಧ್ಯಮದವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋವನ್ನು ಬಿಜೆಪಿ(BJP) ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
Raitha Sena: 'ಮಹದಾಯಿ ಹಾಗೂ ಕಳಸಾ-ಬಂಡೂರಿ ಕುರಿತು ಕಾಂಗ್ರೆಸ್ ಯಾಕೆ ಮೌನವಾಗಿದೆ'
ರಾಜ್ಯ ಮತ್ತು ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆಯೇ ಕಾಂಗ್ರೆಸ್(Congress) ನಾಯಕರು ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಗೆ ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ನಾವು ಮೇಕೆದಾಟು ಪಾದಯಾತ್ರೆ ಮಾಡೇ ಮಾಡುತ್ತೇವೆಂದು ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಈ ನಿಟ್ಟಿನಲ್ಲಿ ಇಂದಿನಿಂದ ಅಂದರೆ ಜ.9ರಿಂದ 19ರವರೆಗೆ 169 ಕಿ.ಮೀ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.