ಬೆಂಗಳೂರು:   ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕಾರಿಣಿಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆ ಹಾಗೂ ಲೋಕಸಭಾ ಚುನಾವಣಾ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ.


COMMERCIAL BREAK
SCROLL TO CONTINUE READING

ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕಾರಣಿ ಸಭೆಯಲ್ಲಿ 800ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಬಳಿ ಒಯ್ಯುವುದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ, ಶಿವಮೊಗ್ಗ, ರಾಯಚೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ, ಸ್ಥಳೀಯ ಸಮಸ್ಯೆಗಳ ಇತ್ಯರ್ಥ, ಪಕ್ಷ ಬಲವರ್ಧನೆ ಸೇರಿದಂತೆ ಹಲವು ವಿಚಾರಗಳ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ.


ಜೂನ್ 25ರಂದು ಹಠಾತ್ತನೆ ಅಹಮದಾಬಾದ್‌ಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಸುದೀರ್ಘ‌ ಚರ್ಚೆ ನಡೆಸಿದ್ದ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ, ಮುಂದಿನ ಅವಧಿಗೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು. ಅದಕ್ಕಾಗಿ ಕರ್ನಾಟಕದಿಂದ 25ರಿಂದ 28 ಸ್ಥಾನ ಗೆಲ್ಲಲು ಪ್ರಯತ್ನಿಸಿ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.