Karnataka BJP: `ರಾಜ್ಯ ಕಮಲ ಪಾಳೆಯಲ್ಲಿ` ಭಾರೀ ಬದಲಾವಣೆ, ವರಿಷ್ಠರಿಂದ ಮಹತ್ವದ ಕ್ರಮ..!
13 ಸದಸ್ಯರು, ಮೂವರು ವಿಶೇಷ ಆಹ್ವಾನಿತರ ಕಮಿಟಿಯನ್ನು ಪುನರ್ ರಚನೆ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗಿದೆ. ಬಿಜೆಪಿ ಕೋರ್ ಕಮಿಟಿಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಿ. ಶ್ರೀರಾಮುಲು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಸೇರ್ಪಡೆಯಾಗಿದ್ದಾರೆ.
ಕೋರ್ ಕಮಿಟಿಯ ಸದಸ್ಯರಾಗಿದ್ದ ಸಿ.ಟಿ. ರವಿ(CT Ravi) ವಿಶೇಷ ಆಹ್ವಾನಿತರಾಗಿದ್ದಾರೆ. 13 ಸದಸ್ಯರು, ಮೂವರು ವಿಶೇಷ ಆಹ್ವಾನಿತರ ಕಮಿಟಿಯನ್ನು ಪುನರ್ ರಚನೆ ಮಾಡಲಾಗಿದೆ. ಸಚಿವ ಅರವಿಂದ ಲಿಂಬಾವಳಿ ಮತ್ತು ಸಿ.ಎಂ. ಉದಾಸಿ ಅವರಿಗೆ ಕೊಕ್ ನೀಡಲಾಗಿದೆ.
HD Kumaraswamy: ಸರ್ಕಾರದ ಮುಂದೆ 'ಒಂದೇ ಬೇಡಿಕೆ' ಇಟ್ಟ ಡಿಕೆಶಿ, HDK..!
ಕೋರ್ ಕಮಿಟಿಯಲ್ಲಿ ನಳಿನ್ ಕುಮಾರ್ ಕಟೀಲು, ಬಿ.ಎಸ್. ಯಡಿಯೂರಪ್ಪ(BS Yediyurappa), ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಸಿ.ಎನ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಆರ್. ಅಶೋಕ್, ಬಿ. ಶ್ರೀರಾಮುಲು, ನಿರ್ಮಲ್ ಕುಮಾರ್ ಸುರಾನಾ, ಬಿ.ಪಿ. ಅರುಣ್ ಕುಮಾರ್ ಅವರಿದ್ದಾರೆ. ವಿಶೇಷ ಆಹ್ವಾನಿತರಾಗಿ ಅರುಣ್ ಸಿಂಗ್, ಡಿ.ಕೆ. ಅರುಣಾ ಮತ್ತು ಸಿ.ಟಿ. ರವಿ ಅವರನ್ನು ನೇಮಕ ಮಾಡಲಾಗಿದೆ.
ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವ ಎಲ್ಲರಿಗೂ ಕಡ್ಡಾಯ ಕರೋನ ಪರೀಕ್ಷೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.