ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಮಾಜಿ ಸಚಿವ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‍ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ತೀರ್ಮಾನಿಸಲಾಗಿದೆ.


COMMERCIAL BREAK
SCROLL TO CONTINUE READING

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು, ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡಬೇಕೆಂದು ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‍(Nalin Kumar Kateel)ಗೆ ಸೂಚನೆ ಕೊಟ್ಟಿದ್ದಾರೆ.


B.S.Yediyurappa: ಮುಂದಿನ ಚುನಾವಣೆಯಲ್ಲಿ ‘ಮಿಷನ್‌ 140’ ಹೊಸ ಟಾರ್ಗೆಟ್ ಮೇಲೆ ‌ಬಿಎಸ್‌ವೈ ಕಣ್ಣು!


ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಯತ್ನಾಳ್ ಹೇಳಿಕೆ ಬಗ್ಗೆ ಪ್ರಮುಖರು ಚರ್ಚೆ ನಡೆಸಿದ್ದಾರೆ. ಯಾರೇ ಇರಲೀ,ಎಷ್ಟೇ ದೊಡ್ಡವರಿರಲಿ, ಪಕ್ಷಕ್ಕಿಂತ ಯಾರೊಬ್ಬರೂ ದೊಡ್ಡವರಲ್ಲ. ಈ ರೀತಿ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ಕೊಡುವುವು ಸರಿಯಲ್ಲ.ಜತೆಗೆ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ.


Coronavirus: ರಾಜ್ಯದಲ್ಲಿ ಶಾಲೆ ಆರಂಭವಾದ 'ಎರಡೇ ದಿನದದಲ್ಲಿ 18 ಶಿಕ್ಷಕರಿಗೆ ಕೊರೊನಾ ಸೋಂಕು'..!


ಕೂಡಲೇ ಅವರಿಗೆ ನೋಟೀಸ್ ಜಾರಿ ಮಾಡಬೇಕೆಂದು ಅರುಣ್ ಸಿಂಗ್, ಕಟೀಲ್‍ಗೆ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಒಂದು ವೇಳೆ ನೋಟಿಸ್‍ಗೆ ಅವರಿಂದ ಸಮರ್ಪಕ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸಲು ಹಿಂದೆ ಮುಂದೆ ನೋಡಬಾರದೆಂದು ಸೂಚನೆ ಕೊಟ್ಟಿದ್ದಾರೆ.


ರಾಜ್ಯದಲ್ಲಿ ಜೆಡಿಎಸ್ ಮುಗಿಸುವ ಎಲ್ಲ ಪ್ರಯತ್ನಗಳು ವಿಫಲ : ಹೆಚ್ ಡಿ ಕುಮಾರಸ್ವಾಮಿ


ಕಳೆದ ಅಕ್ಟೋಬರ್‍ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಚ್ಚು ದಿನ ಅಕಾರದಲ್ಲಿ ಉಳಿಯುವುದಿಲ್ಲ, ಅವರಿಗೆ ಕೇಂದ್ರ ನಾಯಕರು ಗಡುವು ನೀಡಿದ್ದಾರೆ ಎಂದು ಯತ್ನಾಳ್ ಹೇಳಿಕೆ ನಿಡಿದ್ದರು. ಡಿಸೆಂಬರ್ ನಲ್ಲಿ ಮತ್ತೆ ಯತ್ನಾಳ್ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದರು.


Sriramulu,: ಡಿ.ಕೆ.ಶಿವಕುಮಾರ್ ಗೆ 'ಸವಾಲು ಹಾಕಿದ' ಸಚಿವ ಶ್ರೀರಾಮುಲು..!


ಜನವರಿ 14 ರಂದು ಬರುವ ಸಂಕ್ರಾಂತಿ ಹಬ್ಬಕ್ಕೂ ಮೊದಲು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬೇರೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಅವರು ಇತ್ತೀಚಿನ ಹೇಳಿಕೆಯೊಂದರಲ್ಲಿ ತಿಳಿಸಿದ್ದರು.ಇದು ಸಮಯದಿಂದ ನಡೆಯುತ್ತಿದೆ.


January 6: ಸರ್ಕಾರಕ್ಕೆ 'ಬಿಗ್ ಶಾಕ್' ನೀಡಿದ ಖಾಸಗಿ ಶಾಲಾ ಶಿಕ್ಷಕರು​! ಜ.6ರಂದು ಸ್ಕೂಲ್​ ಬಂದ್​..!?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.