ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಸ್ವತಃ ಟ್ವೀಟ್ ಮಾಡುವ ಮೂಲಕ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅವರು ಬಿಜೆಪಿಯ ಸಂಸದರಾಗಿದ್ದಾರೆ.


COMMERCIAL BREAK
SCROLL TO CONTINUE READING

"ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.


ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ." ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.



ಈ ಹಿಂದೆ, ಬಿಜೆಪಿಯ ಹಿರಿಯ ಮುಖಂಡ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನಾ ವೈರಸ್‌ ಸೋಂಕಿಗೆ ಗುರಿಯಾಗಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.