ಡಿಕೆಶಿ ವಿರುದ್ಧ CBI ತನಿಖೆ ವಾಪಸ್: ನಾಳೆ ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!
ಸ್ವಘೋಷಿತ ಸಂವಿಧಾನ ತಜ್ಞ ಸಿಎಂ ಸಿದ್ದರಾಮಯ್ಯನವರು ಅಕ್ರಮ ಆಸ್ತಿ ಗಳಿಕೆ ಆರೋಪಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಿಸಲು ಸಂವಿಧಾನವನ್ನೇ ಗಾಳಿಗೆ ತೂರಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಅಂತಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಡೆಗೆ ಧಿಕ್ಕಾರ ಧಿಕ್ಕಾರ...ಡಿಕೆಶಿಯವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸಚಿವ ಸಂಪುಟವು ಹಿಂಪಡೆದಿದ್ದನ್ನು ವಿರೋಧಿಸಿ ನವೆಂಬರ್ 25ರಂದು ಬೆಳಗ್ಗೆ 10 ಗಂಟೆಗೆ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ’ ಎಂದು ಬಿಜೆಪಿ ಹೇಳಿದೆ.
150 ರೂ. ಖರ್ಚು ಮಾಡಿ ಮೆಟ್ರೋದಲ್ಲಿ ಭಿಕ್ಷೆ ಬೇಡಿದ ಭಿಕ್ಷುಕನಿಗೆ 500 ರೂ. ದಂಡ..!
‘ಸ್ವಘೋಷಿತ ಸಂವಿಧಾನ ತಜ್ಞ ಸಿಎಂ ಸಿದ್ದರಾಮಯ್ಯನವರು ಅಕ್ರಮ ಆಸ್ತಿ ಗಳಿಕೆ ಆರೋಪಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಿಸಲು ಸಂವಿಧಾನವನ್ನೇ ಗಾಳಿಗೆ ತೂರಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಖಾಸಗಿ ವಕೀಲರನ್ನೇ ಅಡ್ವೋಕೇಟ್ ಜನರಲ್ ಆಗಿ ನೇಮಿಸಿ, ಈಗ ತನಿಖೆ ಹಿಂಪಡೆಯಲು ಅಡ್ವೋಕೇಟ್ ಜನರಲ್ ಅವರಿಂದಲೇ ಶಿಫಾರಸು ಮಾಡುವ ಷಡ್ಯಂತರ ರೂಪಿಸಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.
ಡಿಸಿಎಂ ಡಿಕೆಶಿ ಕೇಸ್‌ನಲ್ಲಿ ಅನುಮತಿ ವಾಪಸ್ ಪಡೆದ ಪ್ರಕರಣ
ಹೈಕಮಾಂಡ್‌ಗೆ ಕೋಟಿ ಕೋಟಿ ಕಪ್ಪ ರವಾನೆ!
‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ, ಕರ್ನಾಟಕದಲ್ಲಿ ಕೊಳ್ಳೆ ಹೊಡೆದ ಕೋಟಿ ಕೋಟಿ ಕಪ್ಪವನ್ನು ಹೈಕಮಾಂಡ್‌ಗೆ ರವಾನೆ ಮಾಡುತ್ತಿತ್ತು. ಈಗ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ಯಾವ ನಾಚಿಕೆ ಇಲ್ಲದೆ ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ. ಇಲ್ಲಿ ಕದ್ದ ಹಣದಲ್ಲಿ ಅಲ್ಲಿ ತುಪ್ಪ ಸವರುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಬಿಜೆಪಿ ಕಿಡಿಕಾರಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ