ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿಎಂ ಸಿದ್ದರಾಮಯ್ಯರ ಸರ್ಕಾರ 100 ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ ಹೆಚ್ಚು ಹಳವಂಡಗಳೇ ಹೆಚ್ಚು ಎಂದು ಬಿಜೆಪಿ ಟೀಕಿಸಿದೆ. ‘ಅಧಿಕಾರಿಗಳ ದುರುಪಯೋಗ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ, ಶ್ಯಾಡೋ ಸಿಎಂ, ಕಾಸಿಗಾಗಿ ಪೋಸ್ಟಿಂಗ್, ಮರಳು ಮಾಫಿಯಾ, ರೈತರ ಆತ್ಮಹತ್ಯೆ, ಕಲುಷಿತ ನೀರು, ಕಳಪೆ ಆಹಾರ ವಿತರಣೆ, ಉಡುಪಿಯ ಅಮಾನುಷ ಘಟನೆ ಅಬ್ಬಬ್ಬಾ ‌ಒಂದಾ ಎರಡಾ ಭಂಡ ಕಾಂಗ್ರೆಸ್ಸಿನ 100 ಕರ್ಮ ಕಾಂಡಗಳು ತೆರೆಯುತ್ತವೆ..!’ ಎಂದು ಬಿಜೆಪಿ ಕುಟುಕಿದೆ.


COMMERCIAL BREAK
SCROLL TO CONTINUE READING

ಗ್ಯಾರಂಟಿಗಳ ಪುಂಗಿ ಊದಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದ್ದೂ ಅಲ್ಲದೆ ಇಂದಿಗೂ ಅವುಗಳನ್ನು ಸರಿಯಾಗಿ ಜಾರಿ ಮಾಡಲಾಗಲಿಲ್ಲ. ಗ್ಯಾರಂಟಿಗಳ ಅನುಷ್ಠಾನಕ್ಕೂ ಮೊದಲೇ ರಾಜ್ಯದಲ್ಲಿ ಶುರುವಾಗಿದ್ದು ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ದರ್ಬಾರ್. ಉನ್ನತ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಅಧಿಕಾರ ಚಲಾಯಿಸಿದ್ದರು. ಈ ಮೂಲಕ ರಾಜ್ಯದ ಬೊಕ್ಕಸದಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾದದ್ದು ಎಷ್ಟು ಎಂಬುದನ್ನು ಎಲ್ಲವನ್ನೂ ತಿಳಿದ ಡಿಸಿಎಂ ಡಿಕೆ ಶಿವಕುಮಾರ್ ಅವರೇ ತಿಳಿಸಬೇಕಷ್ಟೆ’ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.


ನೂರು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ


‘ಸುರ್ಜೇವಾಲಾ ಅವರು ಗಂಟು ತೆಗೆದುಕೊಂಡು ದೆಹಲಿ ಫ್ಲೈಟ್ ಹತ್ತುತ್ತಿದ್ದಂತೆ, ಅಸಲಿ ಆಟ ಶುರುವಿಟ್ಟುಕೊಂಡಿದ್ದು ಸಿದ್ದರಾಮಯ್ಯರ ಸುಪುತ್ರ #ShadowCM ಯತೀಂದ್ರ. ಒಂದೇ ಹುದ್ದೆಗೆ 4 ಅಧಿಕಾರಿಗಳಿಗೆ ಶಿಫಾರಸ್ಸು ಪತ್ರಗಳನ್ನು ಕೊಟ್ಟು ಮುಖ್ಯಮಂತ್ರಿಗಳ ಆದೇಶ ಪತ್ರಗಳನ್ನು ದುರುಪಯೋಗ ಮಾಡಿಕೊಳ್ಳಲಾಯಿತು. ಕಾಸಿಗಾಗಿ ಪೋಸ್ಟಿಂಗ್ ದಂಧೆ ರಾಜ್ಯದಲ್ಲಿ ಹೊಸ ಅನಧಿಕೃತ ಉದ್ಯಮವನ್ನೇ ಶುರು ಮಾಡಿತು. ಕೊನೆಗೆ ಸಾಂವಿಧಾನಿಕ ಹುದ್ದೆಯನ್ನೇ ಪುತ್ರನಿಗೆ ನೀಡಿ ಸಿದ್ದರಾಮಯ್ಯರು ನನಗೂ ಧೃತರಾಷ್ಟ್ರನಿಗೂ ವ್ಯತ್ಯಾಸವಿಲ್ಲವೆಂಬುದನ್ನು ಸಾಬೀತುಪಡಿಸಿದರು. ಸೇಡಿನ ರಾಜಕೀಯಕ್ಕಿಳಿದ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಕಿರುಕುಳಕ್ಕೆ ಮನನೊಂದು ಸಾರಿಗೆ ನೌಕರ ಆತ್ಮಹತ್ಯೆ ಯತ್ನ ನಡೆಸಿದ್ದು ಕಲೆಕ್ಷನ್ ಮಾಡಿ ತರದ ಅಧಿಕಾರಿಗಳನ್ನು ನಡೆಸಿಕೊಳ್ಳುವ ರೀತಿಗೆ ಕೈಗನ್ನಡಿ..!’ ಎಂದು ಬಿಜೆಪಿ ಟೀಕಿಸಿದೆ.


ಪ್ರಧಾನಿ ಮೋದಿ ಅವರ ಸರ್ಕಾರದ 5 ಕೆಜಿ ಅಕ್ಕಿಯಲ್ಲಿ 2 ಕೆಜಿಯನ್ನು #ATMSarkaraವೇ ತಿಂದು ತೇಗಿದೆ. ಫಲಾನುಭವಿಗಳಿಗೆ 3 ಕೆಜಿ ಅಕ್ಕಿ ನೀಡಿ 2 ಕೆಜಿ ರಾಗಿ ನೀಡುತ್ತಿದೆ. 5 ಕೆಜಿ ಅಕ್ಕಿಗೆ ಹಣ ಕೊಡುತ್ತೇವೆಂದು ಪಡಿತರ ಚೀಟಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿಲ್ಲವೆಂದು ಇನ್ನೂ ಕಾಗೆ ಹಾರಿಸುತ್ತಲೇ ಇದೆ ಕಾಂಗ್ರೆಸ್..!’ ಎಂದು ಕುಟುಕಿದೆ.


ಇದನ್ನೂ ಓದಿ: "ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.