ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಗಳ ನೇಮಕಾತಿ ನೆನೆಗುದಿಗೆ ಬಿದ್ದಿದೆ. ನಿಗಮ-ಮಂಡಳಿಗಳ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಕಲೆಕ್ಷನ್ ಕೊಡಿ, ನಿಗಮ-ಮಂಡಳಿ ಅಧಿಕಾರ ಪಡಿ’ ಎಂದು ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಈಗಾಗಲೇ ವರ್ಗಾವಣೆಯನ್ನು ಫೋನ್‌ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರ ನಿಗಮ-ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ-ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮ ನಿಗಮ-ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ’ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.


ಇದನ್ನೂ ಓದಿ: ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ಪಟ್ಟಿ ಬಿಡುಗಡೆ!


ಕರ್ನಾಟಕ ಗೃಹ ಮಂಡಳಿಗೆ 10 ಕೋಟಿ ರೂ. ಮತ್ತು ಕರ್ನಾಟಕ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್‍ಗೆ 5 ಕೋಟಿ ರೂ. ನಿಗದಿಪಡಿಸಲಾಗಿದೆ’ ಎಂದು ಬಿಜೆಪಿ ಆರೋಪಿಸಿದೆ.


ಇದನ್ನೂ ಓದಿ: ತಾಯಿ, ಮಗು ಸಾವಿನ ನೈತಿಕ ಹೊಣೆ ಹೊತ್ತು ಸಚಿವ ಜಾರ್ಜ್ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಅಶೋಕ್ ಆಗ್ರಹ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.