ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!
Belagavi Woman Assault Case: ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ಮಾತ್ರ ಈ ಘಟನೆಯ ಬಗ್ಗೆ ತುಟಿಕ್ ಪಿಟಿಕ್ ಅನ್ನುತ್ತಿಲ್ಲವೆಂದು ಬಿಜೆಪಿ ಕಿಡಿಕಾರಿದೆ.
ಬೆಂಗಳೂರು: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ಮಾತ್ರ ಈ ಘಟನೆಯ ಬಗ್ಗೆ ತುಟಿಕ್ ಪಿಟಿಕ್ ಅನ್ನುತ್ತಿಲ್ಲ. ಮಹಿಳಾ ವಿರೋಧಿ ಸಿಎಂ ಸಿದ್ದರಾಮಯ್ಯನವರು, ಬೆಳಗಾವಿಯಲ್ಲೇ ಇದ್ದರೂ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ’ವೆಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ಎರಡೂ ಕಡೆಯವರ ಗಲಾಟೆ ಗದ್ದಲ ಬೇಸರ ಉಂಟು ಮಾಡಿದೆ
‘ಕಾಂಗ್ರೆಸ್‌ನ ಈ ಕಡು ಮಹಿಳಾ ವಿರೋಧಿ ನೀತಿ ಖಂಡಿಸಿ, ಬಿಜೆಪಿ ಇಂದು(ಡಿ.16) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ. ಇದಲ್ಲದೆ ಕೇಂದ್ರ ಬಿಜೆಪಿ ನಿಯೋಗ ಸಂತ್ರಸ್ತೆ ಬಳಿ ತೆರಳಿ, ಸಾಂತ್ವನ ಹೇಳಿ, ಮಾನಸಿಕ ಧೈರ್ಯ ತುಂಬಲಿದೆ.
ಸದನದಲ್ಲಿ ವಿರೋಧ ಪಕ್ಷದ ನಾಯಕನ ಕೊರತೆ ಕಾಣುತ್ತಿತ್ತು : ಸಲೀಂ ಅಹಮದ್
ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.