ಬೆಂಗಳೂರು: ಪಕ್ಷಾಂತರ ಪ್ರವೀಣ ಸಿದ್ದರಾಮಯ್ಯರವರು ಕಾಂಗ್ರೆಸ್‌ಗೆ ಬಂದ ಬಳಿಕ ಮೊದಲು ಮಾಡಿದ ಕೆಲಸವೆಂದರೆ, ಅದು ತಮ್ಮ ಜೊತೆಗಿದ್ದ ದಲಿತ ಸಮುದಾಯದ ನಾಯಕರ ರಾಜಕೀಯ ಜೀವನವನ್ನು ದುರ್ಬಲಗೊಳಿಸಿದ್ದು ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌, ವಿ.ಶ್ರೀನಿವಾಸ ಪ್ರಸಾದ್‌, ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರ ಪ್ರಭಾವಿ ದಲಿತ ನಾಯಕರಿಗೆ ಕಾಂಗ್ರೆಸ್‌ನಲ್ಲಿ ಸಿಗಬೇಕಿದ್ದ ಪ್ರಾಮುಖ್ಯತೆಗೆ ಕಲ್ಲು ಹಾಕಿದ್ದೇ ಸಿದ್ದರಾಮಯ್ಯರವರು’ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

‘ದಲಿತ ನಾಯಕರ ರಾಜಕೀಯ ಜೀವನವನ್ನು ದುರ್ಬಲಗೊಳಿಸಿದ ಮೇಲೆ ಈಗ ಸಿದ್ದರಾಮಯ್ಯರವರ ಕಣ್ಣು ಕಾಂಗ್ರೆಸ್‌ನಲ್ಲಿರುವ ಹಿಂದುಳಿದ ವರ್ಗಗಳ ನಾಯಕರ ಮೇಲೆ ಬಿದ್ದಿದೆ. ಕೇವಲ ಹಿಂದುಳಿದ ವರ್ಗಗಳ ನಾಯಕರನ್ನಷ್ಟೆ ಅಲ್ಲ ಸಿದ್ದರಾಮಯ್ಯರವರು ಈ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳನ್ನು ಸಹ ಸಂಪೂರ್ಣ ಕಡೆಗಣಿಸಿದ್ದಾರೆ. ಚುನಾವಣೆಗಳಲ್ಲಿ "ಅಹಿಂದ" ಹೆಸರಿನಲ್ಲಿ ರಾಜಕಾರಣ ಮಾಡಿ ಯಶಸ್ಸನ್ನು ಕಂಡಿರುವ ಸಿದ್ದರಾಮಯ್ಯರವರು ಚುನಾವಣೆ ಬಳಿಕ "ಹಿಂದ"ದವರನ್ನು ಹಿಂದೆಯೇ ಬಿಟ್ಟು, ತಾವು ಮತ್ತು ತಮ್ಮವರನ್ನು ಮಾತ್ರ ಮುಂದಕ್ಕೆ ಕರೆದುಕೊಂಡು ಹೋಗುತ್ತಾರೆ  ಎಂಬುದು ಬಿ.ಕೆ.ಹರಿಪ್ರಸಾದ್ ಅವರ ಪ್ರಮುಖ ಆರೋಪ’ವೆಂದು ಬಿಜೆಪಿ ಟ್ವೀಟ್ ಮಾಡಿದೆ.


ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ


‘ಈ ಆರೋಪ ರಾಜಕೀಯ ಪ್ರೇರಿತ ಎಂಬ ಹೇಳಿಕೆಗಳು ಸಂಪೂರ್ಣ ಸುಳ್ಳು. ಸಿದ್ದರಾಮಯ್ಯರವರ ರಾಜಕೀಯವನ್ನು ಮತ್ತು ಅಧಿಕಾರ ದೊರೆತಾಗ ಅವರ ಆಡಳಿತವನ್ನು ಒಮ್ಮೆ ಕೂಲಂಕುಷವಾಗಿ ಗಮನಿಸಿದರೆ ಸಾಕು, ಈ ಆರೋಪ ನೂರಕ್ಕೆ ನೂರರಷ್ಟು ನಿಜ ಎಂಬುದು ಸಾಬೀತಾಗುತ್ತದೆ. ಅಷ್ಟಕ್ಕೂ ತಾವೊಬ್ಬ ರಾಜ್ಯ ಕಂಡ ಶ್ರೇಷ್ಠ ನಾಯಕ ದೇವರಾಜ ಅರಸುರ ಅಪರಾವತಾರವೆಂದು ತಮ್ಮ ಭಟ್ಟಂಗಿಗಳಿಂದ ಕರೆಸಿಕೊಳ್ಳುವ ಸಿದ್ದರಾಮಯ್ಯರವರು, ನಿಜಕ್ಕೂ ಹಿಂದುಳಿದ ಹಾಗೂ ದಲಿತ ಸಮುದಾಯಗಳಿಗೆ ನ್ಯಾಯ ನೀಡಿದ್ದಾರಾ ಎಂಬ ಪ್ರಶ್ನೆಗೆ, ಇಲ್ಲವೇ ಇಲ್ಲ ಎಂಬ ಉತ್ತರ ದೊರೆಯುತ್ತದೆ’ ಎಂದು ಬಿಜೆಪಿ ಟೀಕಿಸಿದೆ.


ಲಂಚಕ್ಕೆ ಬೇಡಿಕೆಯಿಟ್ಟ ಆರೋಪ : ಆಲೋಕ್‌ಕುಮಾರ್ ವಿರುದ್ಧದ ಪ್ರಕರಣ ರದ್ದು ಪಡಿಸಿದ ಹೈಕೋರ್ಟ್


‘ಆದರೆ ಇದೆಲ್ಲದರ ನಡುವೆ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಾರ್ಷಿಕ 100 ಕೋಟಿ ರೂ. ಅನುದಾನ ನೀಡಲಾಗುವುದು ಎಂಬುದನ್ನು ಮಾತ್ರ ಬಜೆಟ್‌‌‌ನಲ್ಲಿ ಸಿದ್ದರಾಮಯ್ಯರವರು ಹೆಮ್ಮೆಯಿಂದ ಘೋಷಿಸಿಕೊಂಡಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ವಾರ್ಷಿಕವಾಗಿ ನೀಡುವ ಅನುದಾನದ ಜೊತೆ ಬಂಪರ್‌ ಎಂಬಂತೆ  ಹೆಚ್ಚುವರಿಯಾಗಿ 360 ಕೋಟಿ ರೂ. ಅನುದಾನವನ್ನು ಒದಗಿಸಿದ್ದಾರೆ. ಇದು ಸಿದ್ದರಾಮಯ್ಯರವರು ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮೇಲೆ ಹೊಂದಿರುವ ಡೋಂಗಿ ಪ್ರೇಮಕ್ಕೆ ಸ್ಪಷ್ಟ ನಿದರ್ಶನ. ಇದೆಲ್ಲವನ್ನೂ ಗಮನಿಸಿದರೆ ಸಿದ್ದರಾಮಯ್ಯರವರು ಹಿಂದುಳಿದ ವರ್ಗಗಳ ಮೇಲೆ ತೋರುತ್ತಿರುವ ಅಸಡ್ಡೆಯ ಬಗ್ಗೆ ಬಿ.ಕೆ.ಹರಿಪ್ರಸಾದ್‌ ನೀಡಿದ ಹೇಳಿಕೆಯಲ್ಲಿ ಎಳ್ಳಷ್ಟೂ ಸುಳ್ಳಿಲ್ಲ ಎಂಬುದು ರುಜುವಾತಾಗುತ್ತದೆ’ ಎಂದು ಬಿಜೆಪಿ ಕುಟುಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.