ಕರ್ನಾಟಕದಲ್ಲಿರುವುದು ಸ್ಟಾಲಿನ್‌ರ ಗುಲಾಮ ಸರ್ಕಾರ!: ಬಿಜೆಪಿ ಆಕ್ರೋಶ
Cauvery River Dispute: ಕರ್ನಾಟಕದಲ್ಲಿರುವುದು ಸ್ಟಾಲಿನ್‌ರ ಗುಲಾಮ ಸರ್ಕಾರ..! ಕನ್ನಡ, ಕರ್ನಾಟಕ, ನಾಡ ವಿರೋಧಿ ಕಾಂಗ್ರೆಸ್ಸಿಗೆ ಕನ್ನಡಿಗರು ಧಿಕ್ಕಾರ ಹಾಕುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರು: ಕಾವೇರಿಯನ್ನು ತಮಿಳುನಾಡಿಗೆ ಬಿಟ್ಟು ಕನ್ನಡಿಗರ ಮಾನವನ್ನು ಕಾಂಗ್ರೆಸ್ ಸರ್ಕಾರ ಹರಾಜು ಹಾಕಿದೆ. ಚುನಾವಣೆಗೂ ಮುನ್ನ ಕನ್ನಡಿಗರ ಆಸ್ಮಿತೆಯನ್ನು ಮುಂದೆ ಇಟ್ಟುಕೊಂಡು ಒಣ ರಾಜಕೀಯ ಮಾಡಿದ್ದ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
‘ಆಗ ಸೇವ್ ನಂದಿನಿ ಅಂತ ಸುಳ್ಳು ಸುದ್ದಿ ಸೃಷ್ಟಿಸಿ ಕನ್ನಡಿಗರ ದಾರಿ ತಪ್ಪಿಸಲಾಯಿತು..!, ಹಿಂದಿ ಹೇರಿಕೆಯೆಂದು ಹುಸಿ ಪುಕಾರು ಹಬ್ಬಿಸಿ ಪ್ರಚಾರಗಿಟ್ಟಿಸಿಕೊಳ್ಳಲಾಯಿತು..! ಮತ್ತು ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿದ್ದರೂ ಪಾದಯಾತ್ರೆಯ ನಾಟಕ ಮಾಡಲಾಯಿತು..!’ ಎಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ!
‘ಈಗ ಬರಗಾಲ ಬಂದಿದ್ದರೂ ಜಲಾಶಯಗಳು ಒಣಗುತ್ತಿದ್ದರೂ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕದ್ದು ಮುಚ್ಚಿ ಕಾವೇರಿ ನೀರನ್ನು ಬಿಟ್ಟಿತು..!, I.N.D.I ಮೈತ್ರಿಕೂಟ ಉಳಿಸಿಕೊಳ್ಳಲು, ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಕನ್ನಡಿಗರ ಪರ ಸಮರ್ಥವಾಗಿ ವಾದ ಮಂಡಿಸದೆ ಸೋಲು ಒಪ್ಪಿಕೊಂಡಿತು. ಒಮ್ಮೆಯೂ ಸಿದ್ದರಾಮಯ್ಯರ ಸರ್ಕಾರ ತಮಿಳುನಾಡಿನೊಂದಿಗೆ ಕೂತು ನೀರಿನ ಅಭಾವ ಕುರಿತು ಅರ್ಥ ಮಾಡಿಸಲಿಲ್ಲ..!’ವೆಂದು ಬಿಜೆಪಿ ಕುಟುಕಿದೆ.
ಕಾಂಗ್ರೆಸ್ ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ಕಿವಿ ಮೇಲೆ ಹೂವಿಟ್ಟು ಅಣಕಿಸುತ್ತಿದೆ. ಕರ್ನಾಟಕದಲ್ಲಿರುವುದು ಸ್ಟಾಲಿನ್‌ರ ಗುಲಾಮ ಸರ್ಕಾರ..! ಕನ್ನಡ, ಕರ್ನಾಟಕ, ನಾಡ ವಿರೋಧಿ ಕಾಂಗ್ರೆಸ್ಸಿಗೆ ಕನ್ನಡಿಗರು ಧಿಕ್ಕಾರ ಹಾಕುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಖಂಡಿಸಿ ಪ್ರತಿಭಟನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.