ಬೆಂಗಳೂರು: ಸರ್ಕಾರ ರಚನೆಯಾದ ಎರಡೇ ತಿಂಗಳಲ್ಲಿ ಸ್ವಪಕ್ಷೀಯ ಶಾಸಕರಿಂದಲೇ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಅವಿಶ್ವಾಸವನ್ನು ಎದುರಿಸುತ್ತಿದೆ. ಈ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂಬುದನ್ನು ಬೇರೆ ಯಾರೂ ಹೇಳಬೇಕಾಗಿಲ್ಲ, ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜ್ಯದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ, ಅತಿಯಾದ ಹಸ್ತಕ್ಷೇಪದಿಂದ ಕೋಪಗೊಂಡು ಕಾಂಗ್ರೆಸ್‌ನ 30 ಶಾಸಕರು, ಈಗ 20 ಸಚಿವರ ವಿರುದ್ಧ ತಿರುಗಿಬಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಮಧ್ಯ ಪ್ರವೇಶಿಸುವಂತೆ ದೂರು ಸಲ್ಲಿಸಿದ್ದಾರೆ’ ಅಂತಾ ಹೇಳಿದೆ.
ಇದನ್ನೂ ಓದಿ: ಹೆತ್ತ ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕಾಮುಕ ತಂದೆಗೆ ಬದುಕಿರುವ ತನಕ ಜೈಲು ಶಿಕ್ಷೆ..!
ಖಾಸಗಿ ಉದ್ದೇಶಕ್ಕೆ ಸರ್ಕಾರಿ ಯಂತ್ರ ದುರ್ಬಳಕೆ!
ಸರ್ಕಾರಿ ಯಂತ್ರವನ್ನು ಖಾಸಗಿ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುವುದನ್ನು ಸಿಎಂ ಸಿದ್ದರಾಮಯ್ಯರವರು ಮುಂದುವರೆಸಿದ್ದಾರೆ.
1️⃣ ಮೊನ್ನೆ ರಾಜ್ಯದ ಹಿರಿಯ ಐ.ಎ.ಎಸ್ ಅಧಿಕಾರಿಗಳನ್ನು ತಮ್ಮ ರಾಜಕೀಯ ಕೆಲಸಕ್ಕಾಗಿ ನೇಮಿಸಿಕೊಂಡಿದ್ದರು.
2️⃣ ಇಂದು ಸರ್ಕಾರಿ ಜಾಲತಾಣಗಳನ್ನು ತಮ್ಮ ಪಕ್ಷ ಹಾಗೂ ವೈಯಕ್ತಿಕ ಹಿತಾಸಕ್ತಿಗಳನ್ನು ಬಿಂಬಿಸಲು ದುರ್ಬಳಕೆ… pic.twitter.com/mlcTXKKv1C
— BJP Karnataka (@BJP4Karnataka) July 25, 2023
‘ಸರ್ಕಾರಿ ಯಂತ್ರವನ್ನು ಖಾಸಗಿ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುವುದನ್ನು ಸಿಎಂ ಸಿದ್ದರಾಮಯ್ಯರವರು ಮುಂದುವರೆಸಿದ್ದಾರೆ. ಮೊನ್ನೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳನ್ನು ತಮ್ಮ ರಾಜಕೀಯ ಕೆಲಸಕ್ಕಾಗಿ ನೇಮಿಸಿಕೊಂಡಿದ್ದರು. ಇಂದು ಸರ್ಕಾರಿ ಜಾಲತಾಣಗಳನ್ನು ತಮ್ಮ ಪಕ್ಷ ಹಾಗೂ ವೈಯಕ್ತಿಕ ಹಿತಾಸಕ್ತಿಗಳನ್ನು ಬಿಂಬಿಸಲು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮಾತೆತ್ತಿದರೆ 'ನಾನೊಬ್ಬ ಸಂವಿಧಾನ ತಜ್ಞ' ಎಂದು ಬೀಗುವ ಸಿದ್ದರಾಮಯ್ಯರವರಿಗೆ ಸರ್ಕಾರಿ ವ್ಯವಸ್ಥೆಯನ್ನು ಖಾಸಗಿ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ಕನಿಷ್ಠ ಜ್ಞಾನವೂ ಇಲ್ಲದಂತಾಗಿದೆ’ ಎಂದು ಬಿಜೆಪಿ ಟೀಕಿಸಿದೆ.
ಪೊಲೀಸರನ್ನು ಕಳುಹಿಸಿ ಬೆದರಿಸುವ ಕೆಲಸ!
ರಾಜ್ಯದಲ್ಲಿ @INCKarnataka ಹಿಂದೂಗಳನ್ನು ವ್ಯವಸ್ಥಿತವಾಗಿ ಹಳಿಯುವ ಮತ್ತು ಅವರ ಮೇಲೆ ಸರ್ಕಾರಿ ಯಂತ್ರ ದುರ್ಬಳಕೆ ಮಾಡಿ ಆಕ್ರಮಿಸುವ ಕೆಲಸಕ್ಕೆ ಕೈ ಹಾಕಿದೆ.
ಉಡುಪಿಯ ಕಾಲೇಜಿನಲ್ಲಿ ನಡೆದ ಅಮಾನುಷ ಘಟನೆ ಬಗ್ಗೆ ಸುಮ್ಮನಿರುವ ಸರ್ಕಾರವನ್ನು ಪ್ರಶ್ನಿಸಿದ, ಹಿಂದೂ ವಿದ್ಯಾರ್ಥಿಗಳ ಪರ ಧ್ವನಿಯಾದ ಉಡುಪಿಯ ನಿವಾಸಿ ರಶ್ಮಿ ಸಾಮಂತ ಎಂಬುವವರ ಮನೆಗೆ…
— BJP Karnataka (@BJP4Karnataka) July 25, 2023
‘ರಾಜ್ಯದಲ್ಲಿ ಕಾಂಗ್ರೆಸ್ ಹಿಂದೂಗಳನ್ನು ವ್ಯವಸ್ಥಿತವಾಗಿ ಹಳಿಯುವ ಮತ್ತು ಅವರ ಮೇಲೆ ಸರ್ಕಾರಿ ಯಂತ್ರ ದುರ್ಬಳಕೆ ಮಾಡಿ ಆಕ್ರಮಿಸುವ ಕೆಲಸಕ್ಕೆ ಕೈ ಹಾಕಿದೆ. ಉಡುಪಿಯ ಕಾಲೇಜಿನಲ್ಲಿ ನಡೆದ ಅಮಾನುಷ ಘಟನೆ ಬಗ್ಗೆ ಸುಮ್ಮನಿರುವ ಸರ್ಕಾರವನ್ನು ಪ್ರಶ್ನಿಸಿದ, ಹಿಂದೂ ವಿದ್ಯಾರ್ಥಿಗಳ ಪರ ಧ್ವನಿಯಾದ ಉಡುಪಿಯ ನಿವಾಸಿ ರಶ್ಮಿ ಸಾಮಂತ ಎಂಬುವವರ ಮನೆಗೆ ತುಘಲಕ್ ಸರ್ಕಾರವು ಪೊಲೀಸರನ್ನು ಕಳುಹಿಸಿ ಬೆದರಿಸುವ ಕೆಲಸ ಮಾಡಿದೆ. ಸುಳ್ಳು ಸುದ್ದಿ ಎಂಬ ವೃಥಾ ಆರೋಪ ಹೊರಿಸಿ ರಶ್ಮಿ ಸಾಮಂತರವರ ಮನೆಗೆ ರಾತ್ರೋ ರಾತ್ರಿ ಅಕ್ರಮವಾಗಿ ಪೊಲೀಸರು ನುಗ್ಗಿ ಕಿರುಕುಳ ನೀಡಲು ಯಾವ ಕಾನೂನಿನಲ್ಲಿ ಅವಕಾಶವಿದೆ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿಯೂ ಜೋರಾಗಿದೆ ಮಳೆಯ ಅಬ್ಬರ
ಯಾವ ನ್ಯಾಯಾಲಯದ ಮೂಲಕ ವಾರೆಂಟ್ ಪಡೆದು ಪೊಲೀಸರು ಪರಿಶೀಲನೆ ಹೆಸರಲ್ಲಿ ದಬ್ಬಾಳಿಕೆ ನಡೆಸಿದ್ದಾರೆ? ಒಂದು ಟ್ವೀಟ್ ಮೂಲಕ ಸತ್ಯವನ್ನು ಬಹಿರಂಗಪಡಿಸಿದರೆ ತುಘಲಕ್ ಸರ್ಕಾರದ ಕಣ್ಣು ಕೆಂಪಾಗಿದ್ದು ಏಕೆ.? ಸಿಎಂ ಸಿದ್ದರಾಮಯ್ಯನವರ ಸರ್ಕಾರ ಜಿಹಾದಿ ಮನಸ್ಥಿತಿಯ ಪಟಾಲಂಗಾಗಿ ಖುದ್ದು ಪೊಲೀಸರನ್ನು ಛೂ ಬಿಟ್ಟಿತ್ತೇ? ರಶ್ಮಿ ಪೋಷಕರಿಗೆ ರಾತ್ರಿ ವೇಳೆ ಪದೇ ಪದೆ ಕರೆ ಮಾಡಿ ಕಿರುಕುಳ ನೀಡಿದ್ದು ಕಾನೂನುಬಾಹಿರ..!’ವೆಂದು ಬಿಜೆಪಿ ಟೀಕಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.