ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯನವರ ಗ್ಯಾರಂಟಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ‘ಪ್ರಧಾನಿ ಮೋದಿಯವರ ‘ಸಬ್ ಕಾ ಸಾಥ್-ಸಬ್ ಕಾ ವಿಕಾಸ್’ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ’ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.


COMMERCIAL BREAK
SCROLL TO CONTINUE READING

‘ಶಾಲೆ - ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಮುಖ್ಯಮಂತ್ರಿಗಳು. ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ’ ಎಂದು ಬಿಜೆಪಿ ಟೀಕಿಸಿದೆ.


ಹಿಜಾಬ್ ನಿಷೇಧ ವಾಪಸ್ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದೇನು?


ಕಾಂಗ್ರೆಸ್ ಪ್ರೀತಿಯ ಮಾರುಕಟ್ಟೆಯಲ್ಲಿ ದ್ವೇಷದ ಹೋಲ್ ಸೇಲ್ ಅಂಗಡಿಯನ್ನೇ ತೆರೆದಿದೆ’ ಎಂದು ಬಿಜೆಪಿ ಕಿಡಿಕಾರಿದೆ.


ಇದನ್ನೂ ಓದಿ: "ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.