ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ: ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಆಕ್ರೋಶ!
MUDA fraud case: 4,000 ಕೋಟಿ ರೂ. ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ನಡೆದಿರುವ ಹಗರಣದ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿದ್ದರಾಮಯ್ಯರಿಗೆ “ಗೋಲ್ಮಾಲ್ ಸಿಎಂ’ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯರಿಗೆ 7 ಪ್ರಶ್ನೆ ಕೇಳಿದ್ದು, ʼಗೋಲ್ಮಾಲ್ ಸಿಎಂ-400 ಕೋಟಿ ರೂಪಾಯಿ ಗುಳುಂʼ ಎಂದು ವ್ಯಂಗ್ಯವಾಡಿದ್ದಾರೆ. ʼವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ದಲಿತರ ಹಣವನ್ನು ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆʼ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: ಕನ್ವರ್ಷನ್ ಮಾಫಿಯದ ಕೈಗೊಂಬೆಯಾಗಿ ಅಥವಾ ಡಿಎನ್‍ಎ ಕಾರಣಕ್ಕೆ ರಾಹುಲ್ ಹೇಳಿಕೆ?-ಸಿ.ಟಿ.ರವಿ
ಸಿದ್ದರಾಮಯ್ಯರಿಗೆ ಆರ್.ಅಶೋಕ್ ಕೇಳಿದ 7 ಪ್ರಶ್ನೆಗಳು
ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ?
ಇದನ್ನೂ ಓದಿ: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; KMF ಇತಿಹಾಸದಲ್ಲೇ ಇದೊಂದು ಮೈಲಿಗಲ್ಲು ಎಂದ ಸಿಎಂ ಸಿದ್ದರಾಮಯ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.