ಬೆಂಗಳೂರು: ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಸಿದ್ದರಾಮಯ್ಯನವೇ, #UdupiHorror ಘಟನೆಯ ಸಾಕ್ಷಿ ನಾಶಗೊಳಿಸಿ, ಆ ಪ್ರಕರಣವನ್ನೇ ತಿರುಚುವ ನಿಮ್ಮ ಹೀನ ಮನಸ್ಥಿತಿಯನ್ನು ಬಹಿರಂಗವಾಗಿ ಪ್ರಶ್ನಿಸಿದ್ದಕ್ಕೆ ಸುಳ್ಳು ಕೇಸುಗಳನ್ನು ಹಾಕಿ ನಮ್ಮ ಕಾರ್ಯಕರ್ತರನ್ನು ಬಂಧಿಸುತ್ತಿದ್ದೀರಿ. ಉಡುಪಿಯ ಘಟನೆಯ ಬಗ್ಗೆ ಜಾಗೃತವಾಗಿದೆ ಸಮಾಜ, ಎಲ್ಲರೂ ನಿಮ್ಮ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಅವರೆಲ್ಲರನ್ನೂ ನೀವು ಬಂಧಿಸುವಿರಾ..? ನಿಮ್ಮ ಇಂತಹ ಗೊಡ್ಡು ಬೆದರಿಕೆಗಳಿಗೆ ನಾವೆಂದಿಗೂ ಜಗ್ಗುವುದಿಲ್ಲ.  ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ತುಷ್ಟೀಕರಣ ಬದಿಗೊತ್ತಿ ಅಪರಾಧಿಗಳನ್ನು ಬಂಧಿಸಿ’ ಎಂದು ಸವಾಲು ಹಾಕಿದೆ.


"ಮುಸಲ್ಮಾನ್ ಹೆಣ್ಣುಮಕ್ಕಳ ಮಾನಸಿಕತೆಯೂ ಜಿಹಾದಿ ಕಡೆ ವಾಲ್ತಿದೆ"


‘ರಾಜ್ಯದಲ್ಲಿ ಸಿದ್ದರಾಮಯ್ಯನವರ ತುಘಲಕ್ ದರ್ಬಾರ್ ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎನ್ನುವುದಕ್ಕೆ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಚ್ ಮಾಡಿಸುತ್ತಿರುವುದೇ ಪ್ರತ್ಯಕ್ಷ ಸಾಕ್ಷಿ. ಉಡುಪಿ ಕಾಲೇಜಿನ ಅಮಾನುಷ ಕೃತ್ಯವನ್ನ ಬಯಲಿಗೆಳೆದವರ ಮೇಲೆಯೂ ಪೊಲೀಸರಿಂದ ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.


ಸೇವಾ ನ್ಯೂನ್ಯತೆ ಎಸಗಿದ ಪಿ.ಎಫ್.ಇಲಾಖೆಗೆ ರೂ.6 ಲಕ್ಷ 42 ಸಾವಿರ ದಂಡ 


ಡಬಲ್‌ ಸ್ಟೇರಿಂಗ್‌ ಸರ್ಕಾರ


ಸಿದ್ದರಾಮಯ್ಯ ಮತ್ತು ಡಿಕೆಶಿ ವಿಡಿಯೋವನ್ನು ಬಿಜೆಪಿ ಶೇರ್ ಮಾಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.