ಸಿದ್ದರಾಮಯ್ಯರಿಂದ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ: ಬಿಜೆಪಿ
ಜೀವನಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೇ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಸಿಎಂ ಸದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, ʼತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯನವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋಧಿ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ. ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆʼ ಎಂದು ಟೀಕಿಸಿದೆ.
ಜೀವನಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರುಪಟ್ಟು ಅಧಿಕ ತೆರಿಗೆಪಾಲು ಮತ್ತು ಅನುದಾನಗಳನ್ನು ನೀಡಿದ್ದು ಪ್ರಧಾನಿ ಮೋದಿಯವರ ಸರ್ಕಾರವೆಂದು ಸಂಪೂರ್ಣ ಮಾಹಿತಿಯ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: Hindu Mythology: ಕೃಷ್ಣನ ಸಾವು ಮತ್ತು ದ್ವಾರಕೆಯ ನಾಶ..! ಆ ತಾಯಿಯ ಕಣ್ಣೀರೇ ಕಾರಣ..
▪️ 2004-2014ರವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ ₹81,795 ಕೋಟಿ. ಇದಕ್ಕೆ ಹೋಲಿಸಿದರೆ ಪ್ರಧಾನಿ ಮೋದಿ ಸರ್ಕಾರ ನೀಡಿರುವ ₹2,82,791 ಕೋಟಿ ಶೇ.245ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ.
ಏಕರೂಪ ನಾಗರಿಕ ಸಂಹಿತೆಗೆ ಅಸ್ತು ಎಂದ ಕ್ಯಾಬಿನೆಟ್: ಈ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದೆ UCC!
ಅಷ್ಟಕ್ಕೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲವೆಂದು ಪಟಾಲಂ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಜಲಜೀವನ್ ಮಿಷನ್, ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ, ಪಿಎಂ ಆವಾಸ್ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ? ಎಂಬ ಶ್ವೇತಪತ್ರವನ್ನು ಹೊರಡಿಸುವ ತಾಕತ್ತು, ದಮ್ಮು ನಿಮ್ಮಲ್ಲಿದೆಯೇ. ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತಿಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲವೆಂದು ಬಿಜೆಪಿ ಕುಟುಕಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.