ಬೆಂಗಳೂರು: ರಾಜ್ಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವಿಡಿಯೋ ಸೆರೆ ಹಿಡಿದಿರುವ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

#SaveOurDaughters ಹ್ಯಾಶ್‍ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ದೇಶವೇ ತಲೆ ತಗ್ಗಿಸುವಂತಹ ಉಡುಪಿಯ ಅಮಾನುಷ ಘಟನೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಲು ಎಲ್ಲಾ ರೀತಿಯ ಸಕಲ ಪ್ರಯತ್ನ ನಡೆಸುತ್ತಿದೆ. ತನ್ನ ಒಲೈಕೆ ರಾಜಕಾರಣಕ್ಕಾಗಿ ಹಿಂದೂ ವಿದ್ಯಾರ್ಥಿನಿಯರ ಮೇಲೆ ನಡೆದ ಮಾನಹರಣದ ಸಾಕ್ಷ್ಯಗಳನ್ನು ಪೊಲೀಸರ ಮೇಲೆ ಒತ್ತಡ ಹೇರಿ ತುಘಲಕ್ ಸರ್ಕಾರ ತಿರುಚುತ್ತಿದೆ’ ಎಂದು ಟೀಕಿಸಿದೆ.


ಇದನ್ನೂ ಓದಿ: ಅರಿಶಿನ ಗುಂಡಿಯಲ್ಲಿ ಯುವಕ ನೀರುಪಾಲು ಪ್ರಕರಣ: SDRF ಜೊತೆ ಕಾರ್ಯಾಚರಣೆಗಿಳಿದ ಜ್ಯೋತಿರಾಜ್‌


ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮರಾದ ಯೋಧರಿಗೆ ರಾಜನಾಥ್‌ ಸಿಂಗ್‌ ಪುಷ್ಪ ನಮನ


ಮಹಿಳಾ ಸಬಲೀಕರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುವ ಸಿದ್ದರಾಮಯ್ಯನವರ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎರಚುವ ಕೆಲಸ ಮಾಡುತ್ತಿದೆ. ಒಂದು ಕಡೆ ಹಿಂದೂ ಯುವತಿಯರ ಮೇಲೆ ನಡೆದ ದೌರ್ಜನ್ಯಗಳನ್ನು ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದರೆ, ಮತ್ತೊಂದಡೆ ಜಿಹಾದಿ ಮನಸ್ಥಿತಿಯ ಸಮಾಜಘಾತುಕರನ್ನು ರಕ್ಷಣೆ ಮಾಡಿ ಪ್ರೋತ್ಸಾಹ ನೀಡುತ್ತಿರುವುದು ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬಹುದೊಡ್ಡ ಅಪಾಯ..!’ ಎಂದು ಬಿಜೆಪಿ ಕುಟುಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.