ಮೇಕೆದಾಟು ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಆರಂಭಿಸಿದ್ದಾರೆ: ಬಿಜೆಪಿ

ಮೇಕೆದಾಟು ನಮ್ಮ ಹಕ್ಕು ಎಂದು ರಾಜ್ಯ ಸರ್ಕಾರ ಹಲವು ಬಾರಿ ಪ್ರತಿಪಾದಿಸಿದ್ದರೂ‌ ಕಾಂಗ್ರೆಸ್‌ ಪಕ್ಷದ ನಾಯಕರು ಸುಳ್ಳಿನ ಮೆರವಣಿಗೆ ಹೊರಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Written by - Zee Kannada News Desk | Last Updated : Dec 28, 2021, 03:32 PM IST
  • ನೆಲ-ಜಲದ ವಿಚಾರವಾಗಿಯೂ ಸಿದ್ದರಾಮಯ್ಯ ಇಷ್ಟು ವರ್ಷ ಹೇಳಿದ್ದೆಲ್ಲವೂ ಬರೀ ಸುಳ್ಳು
  • ಸುಳ್ಳಿನ ಸರಮಾಲೆ ರೂಪಿಸಿಯೇ ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದು ಎಂದು ಕುಟುಕಿದೆ ಬಿಜೆಪಿ
  • ಎಷ್ಟೆಂದರೂ ಸುಳ್ಳೇ‌ ನಿಮ್ಮ ಮನೆ ದೇವರಲ್ಲವೇ ಎಂದು ಸಿದ್ದರಾಮಯ್ಯಗೆ ತಿವಿದ ಬಿಜೆಪಿ
ಮೇಕೆದಾಟು ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಆರಂಭಿಸಿದ್ದಾರೆ: ಬಿಜೆಪಿ title=
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆ(Mekedatu Project) ಜಾರಿಗೆ ಆಗ್ರಹಿಸಿ ಜನವರಿ 9ರಿಂದ 19ರತನಕ ಪಾದಯಾತ್ರೆ (Mekedatu Yatra)ಆಯೋಜಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಹಿಂದೆ ಕೃಷ್ಣ ಯೋಜನೆ ವಿಚಾರವಾಗಿ ಸು‌ಳ್ಳುಗಳ ಸರಮಾಲೆ ಎಣೆದಿದ್ದ ಕಾಂಗ್ರೆಸ್‌ ಇದೀಗ ಮೆಕೆದಾಟು ವಿಚಾರದಲ್ಲಿ ಸುಳ್ಳಿನ ರಾಜಕಾರಣ ಆರಂಭಿಸಿದೆ ಅಂತಾ ಆರೋಪಿಸಿದೆ.

#ಬುರುಡೆರಾಮಯ್ಯ ಹ್ಯಾಶ್ ಟ್ಯಾಗ್‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ವಿಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ‘ನೆಲ-ಜಲದ ವಿಚಾರವಾಗಿಯೂ ಸಿದ್ದರಾಮಯ್ಯ ಇಷ್ಟು ವರ್ಷ ಹೇಳಿದ್ದೆಲ್ಲವೂ ಬರೀ ಸುಳ್ಳು. ಕಾಂಗ್ರೆಸ್ ನಡಿಗೆ-ಕೃಷ್ಣೆಯ ಕಡೆಗೆ ಎಂದು 2013ರಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಪಾದಯಾತ್ರೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದ ಸುಳ್ಳುಗಳನ್ನು ನೆನಪಿಸಬೇಕೇ? ಸುಳ್ಳಿನ ಸರಮಾಲೆ ರೂಪಿಸಿಯೇ ಇವರು ಅಧಿಕಾರಕ್ಕೆ ಬಂದಿದ್ದು’ ಎಂದು ಕುಟುಕಿದೆ.

ಇದನ್ನೂ ಓದಿ: ಪರೀಕ್ಷೆ ದಿನಾಂಕ ಪ್ರಕಟ ಮಾಡದ ಶಿಕ್ಷಣ ಇಲಾಖೆ.. SSLC ಪರೀಕ್ಷೆಗೆ ಒಮಿಕ್ರಾನ್ ‌ಕಂಟಕವಾಗುತ್ತಾ?

‘ಸಿದ್ದರಾಮಯ್ಯನವರೇ ಕಾಂಗ್ರೆಸ್(Congress) ನಡಿಗೆ-ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ವಾರ್ಷಿಕ 10 ಸಾವಿರ ಕೋಟಿ ರೂ. ಅನುದಾನ ನೀಡುತ್ತೇನೆ ಎಂದು ಭಾಷಣ ಬಿಗಿದಿರಿ. ಅಂದರೆ 5 ವರ್ಷದಲ್ಲಿ 50 ಸಾವಿರ ಕೋಟಿ ರೂ.! ಆದರೆ ನೀವು ಕೊಟ್ಟಿದ್ದೆಷ್ಟು?’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಕೃಷ್ಣಾ ಮೇಲ್ದಂಡೆಗೆ ವಾರ್ಷಿಕ 10 ಸಾವಿರ ಕೋಟಿ ರೂ. ಅನುದಾನ ಅಸಾಧ್ಯ ಎಂದು ಪತ್ರಿಕೆಗಳು ಅಂದೇ ಬರೆದಿದ್ದವು. ಆದರೆ ಕೂಡಲಸಂಗಮದ ಸತ್ಯತಾಣದಲ್ಲಿ ನಿಂತು ಭಾಷಣ ಮಾಡುವಾಗ ನೀವು ಮಾಧ್ಯಮಗಳನ್ನೇ ತರಾಟೆಗೆ ತೆಗೆದುಕೊಂಡಿರಿ. ಅನುದಾನ ನೀಡಲು ಸಾಧ್ಯವಿದೆ ಎಂದಿರಿ. ಆದರೆ ಅಧಿಕಾರಕ್ಕೆ ಬಂದಾಗ ಕೃಷ್ಣೆಯನ್ನು ಮರೆತಿರಿ’ ಎಂದು ಬಿಜೆಪಿ(BJP) ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಸೇರಬೇಕಿದ್ದ ಹಾಲಿನ ಪುಡಿ ಅಕ್ರಮ ಸಾಗಾಟ, ಟ್ರಕ್ ಚಾಲಕ ಪೋಲಿಸ್ ವಶಕ್ಕೆ

‘2013ರಲ್ಲಿ ಮುಖ್ಯಮಂತ್ರಿಯಾದಾಗ ತಾನು ಕೃಷ್ಣಾ ನದಿಯ ತಟದಲ್ಲಿ ನಿಂತು ಆಡಿದ ಮಾತುಗಳನ್ನು #ಬುರುಡೆರಾಮಯ್ಯ(Siddaramaiah) ಸಂಪೂರ್ಣ ಮರೆತರು. ವರ್ಷಕ್ಕೆ ಅಲ್ಲಪ್ಪ ಅದು 5 ವರ್ಷಕ್ಕೆ 10 ಸಾವಿರ ಕೋಟಿ ರೂ. ಎಂದಿದ್ದು ಎಂದು ವಿಷಯಾಂತರ ಮಾಡಿದರು. ದಾಖಲೆ ಮುಂದಿಟ್ಟಾಗ ‘ಮತಾಂತರ ಕಾಯ್ದೆ’ ಸಂದರ್ಭದಲ್ಲಿ ಆದಂತೆ ಪೇಚಿಗೆ ಸಿಲುಕಿದ್ದು ಮರೆತು ಹೋಯ್ತೆ?’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

‘ಈಗ ಮೇಕೆದಾಟು ವಿಚಾರದಲ್ಲಿ ಸಿದ್ದರಾಮಯ್ಯನವರು ಸುಳ್ಳಿನ ರಾಜಕಾರಣ ಆರಂಭಿಸಿದ್ದಾರೆ. ಮೇಕೆದಾಟು(Mekedatu) ನಮ್ಮ ಹಕ್ಕು ಎಂದು ರಾಜ್ಯ ಸರ್ಕಾರ ಹಲವು ಬಾರಿ ಪ್ರತಿಪಾದಿಸಿದ್ದರೂ‌ ಕಾಂಗ್ರೆಸ್‌ ಪಕ್ಷದ ನಾಯಕರು ಸುಳ್ಳಿನ ಮೆರವಣಿಗೆ ಹೊರಟಿದ್ದಾರೆ. ಎಷ್ಟೆಂದರೂ ಸುಳ್ಳೇ‌ ನಿಮ್ಮ ಮನೆ ದೇವರಲ್ಲವೇ’ ಎಂದು ಬಿಜೆಪಿ ಟೀಕಿಸಿದೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News