ಬೆಂಗಳೂರು: ಕೊಟ್ಟ ಕುದುರೆ ಏರಲರಿಯದೇ ಮತ್ತೊಂದು ಕುದುರೆ ಬಯಸುವವ ವೀರನೂ ಅಲ್ಲ, ಧೀರನೂ ಅಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಮೇಕೆದಾಟು ಯೋಜನೆ(Mekedatu project) ಜಾರಿಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
#ಅಸಹಾಯಕಡಿಕೆಶಿ ಹ್ಯಾಶ್ ಟ್ಯಾಗ್ ಬಳಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಡಿ.ಕೆ.ಶಿವಕುಮಾರ್(DK shivakumar) ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ ಹೇಗೆ? ಟೀಕೆ ಹಾಗೂ ಅಭಿಪ್ರಾಯಗಳೇ ಮನುಷ್ಯನ ವ್ಯಕ್ತಿತ್ವ ರೂಪಿಸುವುದು ಎಂಬುದನ್ನು ಕಾಂಗ್ರೆಸ್ ಅಧ್ಯಕ್ಷರು ಮೊದಲು ಅರ್ಥ ಮಾಡಿಕೊಳ್ಳಲಿ’ ಅಂತಾ ಕಾಲೆಳೆದಿದೆ.
ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು @DKShivakumar ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ ಹೇಗೆ?
ಟೀಕೆ ಹಾಗೂ ಅಭಿಪ್ರಾಯಗಳೇ ಮನುಷ್ಯನ ವ್ಯಕ್ತಿತ್ವ ರೂಪಿಸುವುದು ಎಂಬುದನ್ನು ಕಾಂಗ್ರೆಸ್ ಅಧ್ಯಕ್ಷರು ಮೊದಲು ಅರ್ಥ ಮಾಡಿಕೊಳ್ಳಲಿ.#ಅಸಹಾಯಕಡಿಕೆಶಿ
— BJP Karnataka (@BJP4Karnataka) January 3, 2022
ಇದನ್ನೂ ಓದಿ: Omicron In Karnataka: ಕರುನಾಡಲ್ಲಿ 'ಒಮಿಕ್ರಾನ್' ಅಟ್ಟಹಾಸ..! ಗಡಿಯಲ್ಲಿ ಹೈಅಲರ್ಟ್..!
ಮೇಕೆದಾಟುಗಾಗಿ ಪಾದಯಾತ್ರೆ ನಡೆಸಲು ಮುಂದಾಗಿರುವ ಕಾಂಗ್ರೆಸ್ ಮೊದಲು ಸತ್ಯ ಏನೆಂಬುದನ್ನು ತಿಳಿಸಲಿ.
ಡಿಪಿಆರ್ ಸಿದ್ಧಪಡಿಸುವಲ್ಲಿ ಕಾಂಗ್ರೆಸ್ ಪಾತ್ರ ಏನೂ ಇರಲಿಲ್ಲ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ, ನಿಜವಲ್ಲವೇ?
ಡಿಕೆಶಿಯವರೇ, ನೀವು ಅಧಿಕಾರದಲ್ಲಿದ್ದಾಗ ಕೇವಲ ಪರ್ಸಂಟೇಜ್ ಯೋಜನೆಗಳಿಗೆ ಮಾತ್ರ ಆದ್ಯತೆ ನೀಡಿದ್ದೇ?#ಅಸಹಾಯಕಡಿಕೆಶಿ
— BJP Karnataka (@BJP4Karnataka) January 3, 2022
‘ಮೇಕೆದಾಟುಗಾಗಿ ಪಾದಯಾತ್ರೆ(Mekedatu Padayatra) ನಡೆಸಲು ಮುಂದಾಗಿರುವ ಕಾಂಗ್ರೆಸ್ ಮೊದಲು ಸತ್ಯ ಏನೆಂಬುದನ್ನು ತಿಳಿಸಲಿ. ಡಿಪಿಆರ್ ಸಿದ್ಧಪಡಿಸುವಲ್ಲಿ ಕಾಂಗ್ರೆಸ್ ಪಾತ್ರ ಏನೂ ಇರಲಿಲ್ಲವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ, ನಿಜವಲ್ಲವೇ? ಡಿಕೆಶಿಯವರೇ ನೀವು ಅಧಿಕಾರದಲ್ಲಿದ್ದಾಗ ಕೇವಲ ಪರ್ಸಂಟೇಜ್ ಯೋಜನೆಗಳಿಗೆ ಮಾತ್ರ ಆದ್ಯತೆ ನೀಡಿದ್ದೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.
ಕೊಟ್ಟ ಕುದುರೆ ಏರಲರಿಯದೇ ಮತ್ತೊಂದು ಕುದುರೆ ಬಯಸುವವ ವೀರನೂ ಅಲ್ಲ, ಧೀರನೂ ಅಲ್ಲ.
ಜಲಸಂಪನ್ಮೂಲ ಸಚಿವರಾಗಿದ್ದಾಗ ಮೇಕೆದಾಟು ಯೋಜನೆಗಾಗಿ ಏನು ಮಾಡದ @DKShivakumar ಅವರು ಈಗ #ಸುಳ್ಳಿನಜಾತ್ರೆ ಆರಂಭಿಸಿದ್ದಾರೆ.
ಜಲಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ ಸಾಂಸ್ಥಿಕರಿಸಿ ಹೋದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?#ಅಸಹಾಯಕಡಿಕೆಶಿ
— BJP Karnataka (@BJP4Karnataka) January 3, 2022
‘ಕೊಟ್ಟ ಕುದುರೆ ಏರಲರಿಯದೇ ಮತ್ತೊಂದು ಕುದುರೆ ಬಯಸುವವ ವೀರನೂ ಅಲ್ಲ, ಧೀರನೂ ಅಲ್ಲ. ಜಲಸಂಪನ್ಮೂಲ ಸಚಿವರಾಗಿದ್ದಾಗ ಮೇಕೆದಾಟು ಯೋಜನೆಗಾಗಿ ಏನು ಮಾಡದ ಡಿಕೆಶಿ ಈಗ #ಸುಳ್ಳಿನಜಾತ್ರೆ ಆರಂಭಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ ಸಾಂಸ್ಥಿಕರಿಸಿ ಹೋದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’ ಅಂತಾ ಬಿಜೆಪಿ(BJP) ವ್ಯಂಗ್ಯವಾಡಿದೆ.
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ನಾಯಕರ ರಾಜಕಾರಣ
ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್ ಪಕ್ಷದವರು ಟೀಕೆ ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ : ಶ್ರೀ @nalinkateel
1/2#NalinSpeaks
— BJP Karnataka (@BJP4Karnataka) January 3, 2022
ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್(Congrss) ಪಕ್ಷದವರು ಟೀಕೆ ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: Corona Vaccine:ಮಕ್ಕಳ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ, ಟಫ್ ರೂಲ್ಸ್ ಜಾರಿ ಬಗ್ಗೆ ಸುಳಿವು ನೀಡಿದ ಬೊಮ್ಮಾಯಿ
ಕಾಂಗ್ರೆಸ್ ಪಕ್ಷದ್ದೇ ಸರ್ಕಾರ, ಅವರದೇ ಮುಖ್ಯಮಂತ್ರಿಯಿದ್ದಾಗ ಮೇಕೆದಾಟು ಯೋಜನೆಯ ಬಗ್ಗೆ ಚರ್ಚೆ ಮಾಡಲಿಲ್ಲ ಏಕೆ?
ನಮ್ಮ ಸರ್ಕಾರ ಸಂಪೂರ್ಣ ಬದ್ಧತೆಯೊಂದಿಗೆ ಮೇಕೆದಾಟು ಯೋಜನೆ ಆರಂಭಿಸಲಿದೆ. ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವು ಕೊರೋನಾ ಹಬ್ಬಿಸಲು ಪ್ರಯತ್ನಿಸುತ್ತಿದೆ : ಶ್ರೀ @nalinkateel
2/2#NalinSpeaks
— BJP Karnataka (@BJP4Karnataka) January 3, 2022
‘ಕಾಂಗ್ರೆಸ್ ಪಕ್ಷದ್ದೇ ಸರ್ಕಾರ, ಅವರದೇ ಮುಖ್ಯಮಂತ್ರಿಯಿದ್ದಾಗ ಮೇಕೆದಾಟು ಯೋಜನೆ(Mekedatu Project)ಯ ಬಗ್ಗೆ ಚರ್ಚೆ ಮಾಡಲಿಲ್ಲ ಏಕೆ? ನಮ್ಮ ಸರ್ಕಾರ ಸಂಪೂರ್ಣ ಬದ್ಧತೆಯೊಂದಿಗೆ ಮೇಕೆದಾಟು ಯೋಜನೆ ಆರಂಭಿಸಲಿದೆ. ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವು ಕೊರೊನಾ ಹಬ್ಬಿಸಲು ಪ್ರಯತ್ನಿಸುತ್ತಿದೆ’ ಅಂತಾ ಟೀಕಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.