ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ: ಬಿಜೆಪಿ

ಬಿಜೆಪಿ ಹಾಗೂ ಜೆಡಿಎಸ್ ನ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದ ಸಿದ್ದರಾಮಯ್ಯಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

Written by - Zee Kannada News Desk | Last Updated : Jan 25, 2022, 07:44 PM IST
  • ಬಿಜೆಪಿ & ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ
  • ಬಿಜೆಪಿಯವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ
  • ಡಿಕೆಶಿ ಮತ್ತು ಸಿದ್ದರಾಮಯ್ಯಗೆ ಧೈರ್ಯವಿದ್ದರೆ ಸಂಪರ್ಕದಲ್ಲಿರುವ ಶಾಸಕರ ಹೆಸರು ಬಹಿರಂಗಪಡಿಸಲಿ
ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ: ಬಿಜೆಪಿ title=
ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆಂದು ಬಿಜೆಪಿ ವ್ಯಂಗ್ಯವಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಎಷ್ಟು ಜನ, ಅವರೆಲ್ಲಾ ಯಾರು ಎಂಬುದನ್ನು ಈಗಲೇ ಹೇಳುವುದಿಲ್ಲವೆಂದು ಹೇಳಿದ್ದ ಸಿದ್ದರಾಮಯ್ಯಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

#ಕಾಂಗ್ರೆಸ್‌ಕಳ್ಳಾಟ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ’ ಅಂತಾ ಸವಾಲು ಹಾಕಿದೆ.

ಇದನ್ನೂ ಓದಿBasavaraj Bommai : 30 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ : ಯಾರಿಗೆ ಯಾವ ಜಿಲ್ಲೆ?

‘ಸಿದ್ದರಾಮಯ್ಯ(Siddaramaiah)ನವರೇ ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ’ ಅಂತಾ ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ ಕುಟುಕಿದೆ.

ಎಂ.ಬಿ.ಪಾಟೀಲ್ ಸಮಯದ ಗೊಂಬೆಯಾಗದಿರಲಿ

ಕರ್ನಾಟಕ ಪ್ರದೇಶ ಕಾಂಗ್ರೆಸ್(Congress) ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಸಮಯದ ಗೊಂಬೆಯಾಗದಿರಲಿ ಅಂತಾ ಬಿಜೆಪಿ ಟೀಕಿಸಿದೆ. ‘ಎಂ.ಬಿ.ಪಾಟೀಲ(MB Patil)ರಿಗೆ ಅಭಿನಂದನೆಗಳು. ನಿಮ್ಮ ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ ಎಂದು ನಾವು ಆಶಿಸುತ್ತೇವೆ. ಎಂ.ಬಿ.ಪಾಟೀಲ್‌ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ವೀರಶೈವ - ಲಿಂಗಾಯಿತ ಧರ್ಮ ವಿಭಜ‌ನೆಗೆ ಕಾರಣೀಕರ್ತರಾಗಿದ್ದರು. ಆಗ ಎಂ.ಬಿ.ಪಾಟೀಲ್ ಅವರು ಸಿದ್ದರಾಮಯ್ಯನವರ ಕೈಗೊಂಬೆಯಾಗಿದ್ದರು, ಈಗ ಸಮಯದ ಗೊಂಬೆಯಾಗದಿರಿ’ ಅಂತಾ ಸಲಹೆ ನೀಡಿದೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಬಿಲ್ ಕುಲ್ ಇಲ್ಲ: ಸಚಿವ ಈಶ್ವರಪ್ಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News