ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆಂದು ಬಿಜೆಪಿ ವ್ಯಂಗ್ಯವಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಎಷ್ಟು ಜನ, ಅವರೆಲ್ಲಾ ಯಾರು ಎಂಬುದನ್ನು ಈಗಲೇ ಹೇಳುವುದಿಲ್ಲವೆಂದು ಹೇಳಿದ್ದ ಸಿದ್ದರಾಮಯ್ಯಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.


COMMERCIAL BREAK
SCROLL TO CONTINUE READING

Siddaramaiah) ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ’ ಅಂತಾ ಸವಾಲು ಹಾಕಿದೆ.


ಇದನ್ನೂ ಓದಿBasavaraj Bommai : 30 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ : ಯಾರಿಗೆ ಯಾವ ಜಿಲ್ಲೆ?


‘ಸಿದ್ದರಾಮಯ್ಯ(Siddaramaiah)ನವರೇ ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ’ ಅಂತಾ ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ ಕುಟುಕಿದೆ.


ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಬಿಲ್ ಕುಲ್ ಇಲ್ಲ: ಸಚಿವ ಈಶ್ವರಪ್ಪ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.