ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ(Siddaramaiah) ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳ ಹಿಜಾಬ್(Hijab Row) ಹಾಗೂ ಕೇಸರಿ ವಸ್ತ್ರಧಾರಣೆ ವಿವಾದ ತಾರಕಕ್ಕೇರಿದೆ. ಈ ವಿವಾದ ವಿಚಾರವಾಗಿ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದೆ.
‘ಹೆಣ್ಣು ಮಕ್ಕಳನ್ನು ತರಗತಿಗೆ ಹೋಗದಂತೆ ತಡೆಯುವುದು ಅಮಾನವೀಯ ಮತ್ತು ಮುಸ್ಲಿಂ ಹೆಣ್ಣು ಮಕ್ಕಳಿಗೆ(Muslim Girls) ಶಿಕ್ಷಣ ನಿರಾಕರಿಸುವ ಪ್ರಯತ್ನ ಇದಾಗಿದೆ. ಅವರು ಹಿಜಾಬ್ ಧರಿಸಿದರೆ ಏನು ಸಮಸ್ಯೆ?’ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರ(BJP Government)ಕ್ಕೆ ಪ್ರಶ್ನಿಸಿದ್ದರು. ಸಿದ್ದರಾಮಯ್ಯರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರೇ, ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ?
ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ @siddaramaiah ಅವರು ಹಿಜಾಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ.#CongressVoteBankPolitics
— BJP Karnataka (@BJP4Karnataka) February 5, 2022
ಇದನ್ನೂ ಓದಿ: ನದಿ ಜೋಡಣೆಯಿಂದ ಕರ್ನಾಟಕಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ
#CongressVoteBankPolitics ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ(Siddaramaiah) ಅವರೇ ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ? ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ ಸಿದ್ದರಾಮಯ್ಯನವರು ಹಿಜಾಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ’ ಅಂತಾ ಕುಟುಕಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ರಾಜಕೀಯ ಪ್ರೇರಿತ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ.
ಜನಮಾನಸದಿಂದ ಮಾಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಮತೀಯವಾದಿ ಶಕ್ತಿಗಳ ಜತೆ ಸೇರಿ ಈ ವಿವಾದವನ್ನು ವಿಸ್ತಾರಗೊಳಿಸುತ್ತಿದೆ. ಇಲ್ಲಿರುವುದು ಮತಬ್ಯಾಂಕ್ ರಾಜಕಾರಣ ಮಾತ್ರ.#CongressVoteBankPolitics
— BJP Karnataka (@BJP4Karnataka) February 5, 2022
‘ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ(Hijab Row) ರಾಜಕೀಯ ಪ್ರೇರಿತ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಜನಮಾನಸದಿಂದ ಮಾಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಮತೀಯವಾದಿ ಶಕ್ತಿಗಳ ಜೊತೆ ಸೇರಿ ಈ ವಿವಾದವನ್ನು ವಿಸ್ತಾರಗೊಳಿಸುತ್ತಿದೆ. ಇಲ್ಲಿರುವುದು ಮತಬ್ಯಾಂಕ್ ರಾಜಕಾರಣ ಮಾತ್ರ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿ ಮೊದಲ ಬಜೆಟ್: ಆರ್ಥಿಕ ಮುಗ್ಗಟ್ಟಿನ ಮದ್ಯೆ ಆಯವ್ಯಯ! ಯಾವ ಯೋಜನೆಗಳಿಗೆ ಆದ್ಯತೆ?
ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ.
ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ.
ಹಿಜಾಬ್ ಪ್ರಕರಣದ ಹಿಂದಿರುವ "ಕಾಣದ ಕೈ"ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ.#CongressVoteBankPolitics
— BJP Karnataka (@BJP4Karnataka) February 5, 2022
‘ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷ(Congress Party)ದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ. ಹಿಜಾಬ್ ಪ್ರಕರಣದ ಹಿಂದಿರುವ ‘ಕಾಣದ ಕೈ’ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ’ ಅಂತಾ ಬಿಜೆಪಿ ಟೀಕಿಸಿದೆ.
ಇನ್ನು ಹಿಜಾಬ್ ವಿವಾದ ವಿಚಾರವಾಗಿ ಮುಸ್ಲಿಂ ಹೆಣ್ಣುಮಕ್ಕಳಿಗೆ(Muslim Girls Hijab Row) ತರಗತಿಗಳಿಗೆ ಅವಕಾಶ ನೀಡದಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಅಂತಾ ಕಾಂಗ್ರೆಸ್ ಹೇಳಿದರೆ, ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಅಂತಾ ಬಿಜೆಪಿ ಆರೋಪಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.