ಬೆಂಗಳೂರು: ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ(Siddaramaiah) ಅಂತಾ ಕರ್ನಾಟಕ ಬಿಜೆಪಿ ಟೀಕಿಸಿದೆ. ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, #ಜಾತಿವಿಭಜಕಸಿದ್ದರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಉಪಚುನಾವಣೆ(Sindagi By election)ಯ ಸಮಾವೇಶದ ವೇಳೆ ಮಾತನಾಡಿದ್ದ ಸಿದ್ದರಾಮಯ್ಯ, ‘ಸಮಾಜದ ಎಲ್ಲಾ ಜಾತಿ, ಸಮುದಾಯದ ಜನರನ್ನು ಒಟ್ಟಾಗಿ ಕರೆದೊಯ್ಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿ ಅವರ ಹಣ, ಬಣ್ಣದ ಮಾತುಗಳಿಗೆ ಮರುಳಾಗದೆ ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡುತ್ತೇನೆ’ ಅಂತಾ ಹೇಳಿದ್ದರು.


ಸಿದ್ದರಾಮಯ್ಯರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕು: ವಿ.ಶ್ರೀನಿವಾಸ್ ಪ್ರಸಾದ್ ಕಿಡಿಕಿಡಿ


ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ(Karnataka BJP) ತಿರುಗೇಟು ನೀಡಿದ್ದು, ‘ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


Siddaramaiah) ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?’ ಅಂತಾ ಬಿಜೆಪಿ ಪ್ರಶ್ನಿಸಿದೆ. ‘ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ’ ಅಂತಾ ಬಿಜೆಪಿ ಕುಟುಕಿದೆ.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು: ಬಿಜೆಪಿ ಟೀಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ