ಜೆಡಿಎಸ್ ಕುಟುಂಬ ರಾಜಕಾರಣದ ರೆಂಬೆ-ಕೊಂಬೆ ಎಷ್ಟೊಂದು ಸಮೃದ್ಧ!: ಬಿಜೆಪಿ ವ್ಯಂಗ್ಯ
#ಮಿಷನ್‌ಕುಟುಂಬರಾಜಕಾರಣ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಕುಟುಂಬ ರಾಜಕಾರಣ ಜೆಡಿಎಸ್ ಪಕ್ಷದ ಸಿದ್ಧಾಂತ’ವೆಂದು ಟೀಕಿಸಿದೆ.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ನಮಗೆ ಯಾವುದೇ ಕೆಟ್ಟ ಹೆಸರು ಬರಬಾರದು. ನಮ್ಮ ಮನೆಯಲ್ಲಿ ಯಾರನ್ನೂ ನಿಲ್ಲಿಸಲು ತೀರ್ಮಾನ ಮಾಡಿಲ್ಲವೆಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ(HD Deve Gowda)ರ ಹೇಳಿಕೆಗೆ ಕರ್ನಾಟಕ ಬಿಜೆಪಿ ವ್ಯಂಗ್ಯವಾಡಿದೆ. #ಮಿಷನ್‌ಕುಟುಂಬರಾಜಕಾರಣ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಕುಟುಂಬ ರಾಜಕಾರಣ ಜೆಡಿಎಸ್ ಪಕ್ಷ(JDS Party)ದ ಸಿದ್ಧಾಂತ’ವೆಂದು ಟೀಕಿಸಿದೆ.
‘ಭವಾನಿ ರೇವಣ್ಣ ಅವರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಕಾರ್ಯಕರ್ತರ ಭಾವನೆಗೆ ಬೆಲೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಪ್ಪಿಗೆ ಸೂಚಿಸಿದ್ದಾರೆ. ಕುಟುಂಬ ರಾಜಕಾರಣ(JDS Family Politics)ದ ಇನ್ನೊಂದು ಮುಖ ಅನಾವರಣವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ- ಡಿಕೆ ಶಿವಕುಮಾರ್
‘ಓಲೈಕೆ ರಾಜಕಾರಣ ಕಾಂಗ್ರೆಸ್ ಪಕ್ಷ(Congress Party)ದ ಸಿದ್ಧಾಂತ. ಕುಟುಂಬ ರಾಜಕಾರಣ ಜೆಡಿಎಸ್ ಪಕ್ಷದ ಸಿದ್ಧಾಂತ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಈ ಎರಡು ಪಕ್ಷಗಳು ಕುಟುಂಬವಾದಕ್ಕೆ ಮಣೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ವ್ಯಂಗ್ಯ’ ಎಂದು ಬಿಜೆಪಿ ಕುಟುಕಿದೆ.
[[{"fid":"222129","view_mode":"default","fields":{"format":"default","field_file_image_alt_text[und][0][value]":"JDS","field_file_image_title_text[und][0][value]":"JDS"},"type":"media","field_deltas":{"1":{"format":"default","field_file_image_alt_text[und][0][value]":"JDS","field_file_image_title_text[und][0][value]":"JDS"}},"link_text":false,"attributes":{"alt":"JDS","title":"JDS","class":"media-element file-default","data-delta":"1"}}]]
‘ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ... ಎಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ... ಜೆಡಿಎಸ್ ಪಕ್ಷದಲ್ಲಿ ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧೆ..?
ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ(Karnataka MLC Election) ಘೋಷಣೆಯಾಗಿದೆ. ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿ.14ರಂದು ಫಲಿತಾಂಶ ಪ್ರಕಟವಾಗಲಿದೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಚರ್ಚೆಗಳು ಆರಂಭವಾಗಿವೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಈ ಚುನಾವಣೆ ನಡೆಯುತ್ತಿದೆ. ಹೀಗಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ರಮುಖ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
[[{"fid":"222130","view_mode":"default","fields":{"format":"default","field_file_image_alt_text[und][0][value]":"JDS","field_file_image_title_text[und][0][value]":"JDS"},"type":"media","field_deltas":{"2":{"format":"default","field_file_image_alt_text[und][0][value]":"JDS","field_file_image_title_text[und][0][value]":"JDS"}},"link_text":false,"attributes":{"alt":"JDS","title":"JDS","class":"media-element file-default","data-delta":"2"}}]]
ಇದನ್ನೂ ಓದಿ: Bitcoin Scam: ಪ್ರಧಾನಿ ಮೋದಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?, ಸಿದ್ದರಾಮಯ್ಯ ಪ್ರಶ್ನೆ
ಹಾಸನ ಜಿಲ್ಲೆಯಲ್ಲಿ ಎಂ.ಎ.ಗೋಪಾಲಸ್ವಾಮಿಯವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳಲಿದ್ದು, 1 ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಈ 1 ಸ್ಥಾನಕ್ಕೆ ಯಾರಿಗೆ ಟಿಕೆಟ್ ಸಿಗಲಿದೆ? ಅನ್ನೋದು ತೀವ್ರ ಕುತೂಹಲ ಮೂಡಿಸಿದೆ. ಎಚ್.ಡಿ.ದೇವೇಗೌಡರ ಮೊಮ್ಮಗ, ಎಚ್.ಡಿ.ರೇವಣ್ಣ, ಭವಾನಿ ದಂಪತಿ ಪುತ್ರ ಸೂರಜ್ ರೇವಣ್ಣ(Suraj Revanna) ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಸೂರಜ್ ರೇವಣ್ಣ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆಂಬ ಸುದ್ದಿ ಹಬ್ಬಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಅನ್ನೋದು ಕುತೂಹಲ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.