ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟ ಬುತ್ತಿ!: ಖರ್ಗೆಗೆ ಬಿಜೆಪಿ ತಿರುಗೇಟು

ಕಲ್ಯಾಣ ಕರ್ನಾಟಕದ ಪ್ರಗತಿ ನನ್ನಿಂದಲೇ ಆಯ್ತು ಎನ್ನುವ ಮಲ್ಲಿಕಾರ್ಜುನ್ ಖರ್ಗೆಗೆ ನಿದ್ರಾಹೀನತೆಯ ಸಮಸ್ಯೆ ಇರಬೇಕು ಎಂದು ಬಿಜೆಪಿ ಟೀಕಿಸಿದೆ.

Written by - Zee Kannada News Desk | Last Updated : Dec 4, 2021, 01:56 PM IST
  • ನೀವು ಹೋದಲೆಲ್ಲ ಸೋಲು ಕಟ್ಟಿಟ್ಟ ಬುತ್ತಿ ಎಂದು ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ
  • ಯಾರನ್ನು ಸೋಲಿಸಬೇಕು ಯಾರ ಕೈ ಹಿಡಿಯಬೇಕೆಂದು ರಾಜ್ಯದ ಜನರು ನಿರ್ಧರಿಸುತ್ತಾರೆ
  • ನನ್ನ ಬಗ್ಗೆ ಪ್ರಧಾನಿ ಮೋದಿಗೆ ಭಯ ಎಂದಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ
ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟ ಬುತ್ತಿ!: ಖರ್ಗೆಗೆ ಬಿಜೆಪಿ ತಿರುಗೇಟು title=
ಮಲ್ಲಿಕಾರ್ಜುನ್ ಖರ್ಗೆಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ನನ್ನ ಬಗ್ಗೆ ಪ್ರಧಾನಿ ಮೋದಿಗೆ ಭಯ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ(Mallikarjun Kharge)ಗೆ ಬಿಜೆಪಿ ತಿರುಗೇಟು ನೀಡಿದೆ. ಶನಿವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ‘ಮಾನ್ಯ ಖರ್ಗೆಯವರೇ ಮೋದಿಗೆ ನಿಮ್ಮನ್ನು ಕಂಡರೆ ಭಯವೇ? ಲೋಕಸಭಾ ಚುನಾವಣಾ ಸೋಲಿನ ನೋವು ನಿಮ್ಮನ್ನು ಈಗಲೂ ನಿದ್ರೆ ಮಾಡಲು ಬಿಡುತ್ತಿಲ್ಲ ಎನ್ನುವುದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು. ನಿದ್ದೆಗೆಟ್ಟಾಗ, ಆರೋಗ್ಯ, ಮನಸ್ಸು, ಬುದ್ಧಿ, ಮಾತು ಎಲ್ಲವೂ ಕೆಡುತ್ತದೆ. ಯಾರನ್ನು ಸೋಲಿಸಬೇಕು ಯಾರ ಕೈ ಹಿಡಿಯಬೇಕೆಂದು ಜನ ನಿರ್ಧರಿಸುತ್ತಾರೆ’ ಅಂತಾ ಬಿಜೆಪಿ ಕುಟುಕಿದೆ.

‘ಮಾನ್ಯ ಖರ್ಗೆಯವರೇ ನೀವು ಈಗ ಪರಿಷತ್ ಚುನಾವಣಾ(Karnataka MLC Election) ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಿಮ್ಮ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡುತ್ತಿದ್ದೀರಿ. ನಾಳೆ ಆ ಅಭ್ಯರ್ಥಿ ಸೋತರೆ, ನಾನು‌ ಮೋದಿ ವಿರುದ್ಧ ಮಾತನಾಡಿದೆ. ಅದಕ್ಕಾಗಿಯೇ ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು ಎಂದು ನೊಂದುಕೊಳ್ಳಬೇಡಿ. ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟಬುತ್ತಿ!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮೊಟ್ಟೆ ಕೊಡುವುದಿರಲಿ ಈ ಸರ್ಕಾರ ಬಿಸಿಯೂಟಕ್ಕೆ ಸರಿಯಾದ ದಿನಸಿ ಒದಗಿಸುತ್ತಿದೆಯೇ?-ಡಿಕೆಶಿ ಪ್ರಶ್ನೆ

‘ಖರ್ಗೆಯವರೇ ನಿಮ್ಮ ಸೋಲಿಗೆ ನೀವು ಕೊಡುತ್ತಿರುವ ಕಾರಣ ‘ಪಿಳ್ಳೆ ನೆವ’ ಎಂಬಂತಿದೆ. ನಿಮ್ಮ ದುರಾಡಳಿತ, ಕುಟುಂಬ ರಾಜಕಾರಣ, ಪುತ್ರ ವ್ಯಾಮೋಹ, ಭ್ರಷ್ಟಾಚಾರದಿಂದ ರೋಸಿ ಹೋದ ಜನರು ನಿಮ್ಮನ್ನು ಸೋಲಿಸಿದ್ದರು. ಆ ಸೋಲಿಗೆ ನೀವು ಅನ್ಯರನ್ನು ಹೊಣೆಯಾಗಿಸಬೇಡಿ. ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಹಾಕುವುದೇ ಪ್ರತಿಸ್ಪರ್ಧಿಯನ್ನು ಸೋಲಿಸುವುದಕ್ಕೆ. ಖರ್ಗೆಯವರೇ ಕಾಂಗ್ರೆಸ್ ಪಕ್ಷ(Congress Party)ದ ವಲಯದಲ್ಲಿ ನಿಮ್ಮ ಬಗ್ಗೆ ಒಂದು ಮಾತಿದೆ. ನಿಮಗೂ ಗೊತ್ತಿರಬಹುದು. ಖರ್ಗೆಯವರು ರಾಜಕೀಯಕ್ಕೆ ಬಂದಾಗಿನಿಂದ ಸರ್ಕಾರಿ ವೆಚ್ಚದಲ್ಲೇ‌ ಬದುಕಿದ್ದು ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತದೆ. ಅಧಿಕಾರವಿಲ್ಲದೆ ಬದುಕು ಅಸಹನೀಯ ಅನ್ನಿಸುತ್ತಿರಬೇಕು, ಹಿಂಬಾಗಿಲ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದು ಅದಕ್ಕಾಗಿಯಲ್ಲವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಖರ್ಗೆಯವರೇ ನಿಮ್ಮ ಜಿಲ್ಲೆಯ ಗ್ರಾಮಗಳಿಗೆ ನೀರು, ರಸ್ತೆ ಸಂಪರ್ಕ ಕಲ್ಪಿಸುವುದಕ್ಕೆ ನಿಮಗಿನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗ ಕಲ್ಯಾಣ ಕರ್ನಾಟಕದ ಪ್ರಗತಿ ನನ್ನಿಂದಲೇ ಆಯ್ತು ಎನ್ನುತ್ತೀರಿ. ಬಹುಶಃ ಈ ಭ್ರಮೆಯೂ ನಿದ್ರಾಹೀನತೆಯ ಸಮಸ್ಯೆ ಇರಬೇಕು. ನಕಲಿ ಗಾಂಧಿ ಕುಟುಂಬದ ಸೇವೆ ಮತ್ತು ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ’ ಎಂದು ಬಿಜೆಪಿ(Karnataka BJP) ಟೀಕಿಸಿದೆ.

ಇದನ್ನೂ ಓದಿ: "ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ."

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News