ಕಾಂಗ್ರೆಸ್ಸಿಗರು ಅಂದು ನಿದ್ದೆ ಮಾಡಿ ಇಂದು ಸುಳ್ಳಿನ ಜಾತ್ರೆ ಮಾಡ್ತಿದ್ದಾರೆ: ಬಿಜೆಪಿ

ಕಾಂಗ್ರೆಸ್ಸಿಗರೇ ಅಂತರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂಬ ಪಾಠವನ್ನು ಇತಿಹಾಸದಿಂದಲೂ ಕಲಿತಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

Written by - Zee Kannada News Desk | Last Updated : Jan 8, 2022, 12:39 PM IST
  • ಮೇಕೆದಾಟು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ
  • 2014ರಲ್ಲಿ ಡಿಪಿಆರ್ ರಚನೆಗೆ ಜಾಗತಿಕ ಪ್ರಸ್ತಾವನೆ ಕರೆದು 2018ರವರೆಗೂ ಕಣ್ಣುಮುಚ್ಚಿ ಕುಳಿತುಕೊಂಡಿದ್ದೇ ಕಾಂಗ್ರೆಸ್ ಸಾಧನೆ
  • ಕಾಂಗ್ರೆಸ್ಸಿಗರೇ ಅಂತರಾಜ್ಯ ಜಲವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂಬ ಪಾಠವನ್ನು ಇತಿಹಾಸದಿಂದ ಕಲಿತಿಲ್ಲವೇ?
ಕಾಂಗ್ರೆಸ್ಸಿಗರು ಅಂದು ನಿದ್ದೆ ಮಾಡಿ ಇಂದು ಸುಳ್ಳಿನ ಜಾತ್ರೆ ಮಾಡ್ತಿದ್ದಾರೆ: ಬಿಜೆಪಿ title=
ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಮೇಕೆದಾಟು ವಿಚಾರ(Mekedatu Project Dispute)ದಲ್ಲಿ ಕರ್ನಾಟಕಕ್ಕೆ ಐತಿಹಾಸಿಕ ಅನ್ಯಾಯವಾಗಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ನೇರ ಕಾರಣವೆಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘2014ರಲ್ಲಿ ಡಿಪಿಆರ್ ರಚನೆಗೆ ಜಾಗತಿಕ ಪ್ರಸ್ತಾವನೆ ಕರೆದು 2018ರವರೆಗೂ ಕಣ್ಣುಮುಚ್ಚಿ ಕುಳಿತುಕೊಂಡಿದ್ದೇ ಕಾಂಗ್ರೆಸ್ ಸಾಧನೆ. ಕಾಂಗ್ರೆಸ್ಸಿಗರು ಅಂದು ಕಾಲಹರಣ ಮಾಡಿ ಇಂದು ಸುಳ್ಳಿನ ಜಾತ್ರೆ ಮಾಡುತ್ತಿದ್ದಾರೆ’ ಅಂತಾ ಕುಟುಕಿದೆ.

‘ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ(Karnataka Govt.) ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ’ ಅಂತಾ ಸವಾಲ್ ಹಾಕಿದೆ.

ಇದನ್ನೂ ಓದಿ: Congress : ನಾಳೆಯಿಂದ ಕಾಂಗ್ರೆಸ್ ಪಾದಯಾತ್ರೆ ; ಸರ್ಕಾರ ರಚಿಸಿದ ಚಕ್ರವ್ಯೂಹ ಛೇದಿಸಲು ಕೈ ಸಿದ್ದ? 

‘ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಾಕಿ ಇದೆ. ಈ ಹಂತದಲ್ಲಿ ಯೋಜನೆ ಜಾರಿಗೆ ಮುಂದಾಗುವುದು, ಜಾರಿಗಾಗಿ ಒತ್ತಡ ಹೇರುವುದು ನ್ಯಾಯಾಂಗ ನಿಂದನೆಯಲ್ಲವೇ? ಈ ಕನಿಷ್ಠ ಪ್ರಜ್ಞೆಯೂ ಕಾಂಗ್ರೆಸ್ ನಾಯಕರಿಗಿಲ್ಲವೇ? ಸೆಕ್ಷನ್ ಸಿದ್ದರಾಮಯ್ಯ(Siddaramaiah) ಈ ವಿಚಾರದಲ್ಲೂ ಬುರುಡೆ ಬಿಡುತ್ತಾರಾ?’ ಅಂತಾ ಬಿಜೆಪಿ ವ್ಯಂಗ್ಯವಾಡಿದೆ.

‘ಮೇಕೆದಾಟು ಯೋಜನೆ(Mekedatu Project)ಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ(Siddaramaiah and DK Shivakumar) ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ?’ ಅಂತಾ ಪ್ರಶ್ನಿಸಿದೆ.

ಇದನ್ನೂ ಓದಿ: Weekend Curfew: ವಿರೋಧದ ಮಧ್ಯೆಯೂ ವಾರಾಂತ್ಯ ಕರ್ಫ್ಯು ಜಾರಿ, ಅನಾವಶ್ಯಕ ಓಡಾಟದ ಮೇಲೆ ಖಾಕಿ ಕಣ್ಣು!

‘ಕಾಂಗ್ರೆಸ್ಸಿಗರೇ ಅಂತರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂಬ ಪಾಠವನ್ನು ಇತಿಹಾಸದಿಂದಲೂ ಕಲಿತಿಲ್ಲವೇ? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ?’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News