ಬೆಂಗಳೂರು: ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳು ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ನಿತ್ಯ ನಿರಂತರ ಜರುಗುತ್ತಿರುವ ಇಂತಹ ಹಲವಾರು ಘಟನೆಗಳಿಗೆ ಸಿದ್ದರಾಮಯ್ಯ ನೇತೃತ್ವದ #ATMSarkaraವೇ ನೇರ ಹೊಣೆ!’ ಎಂದು ಬಿಜೆಪಿ ಕುಟುಕಿದೆ.
ಇದನ್ನೂ ಓದಿ: ಬಿಜೆಪಿಯಲ್ಲಿ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!: ಕಾಂಗ್ರೆಸ್
‘ಕಾಂಗ್ರೆಸ್ ಸಾರಿರುವ ಸುಳ್ಳುಗಳಿಂದ ಜನಸಾಮಾನ್ಯರ ಹಾಗೂ ಸರ್ಕಾರಿ ಸಿಬ್ಬಂದಿಗಳ ನಡುವೆ ಅನಾವಶ್ಯಕ ಸಂಘರ್ಷ ನಡೆಯುವಂತಾಗಿದೆ. ‘ಸರ್ಕಾರದ ಗ್ಯಾರಂಟಿಗಳಿಂದ ಬಸ್ಸುಗಳಲ್ಲಿ ಸಿಬ್ಬಂದಿಗಳು ಹಾಗೂ ಪ್ರಯಾಣಿಕರ ನಡುವೆ ವಾಗ್ವಾದ ನಡೆಯುತ್ತಿದೆ’ ಎಂದು ಅಸಹಾಯಕತೆಯಿಂದ ಕೆಎಸ್ಆರ್ಟಿಸಿ ನೌಕರರ ಸಂಘ ಪತ್ರ ಬರೆದಿದೆ! ಸಾರ್ವಜನಿಕರ ಭಾವನೆಗಳೊಂದಿಗೆ ಚೆಲ್ಲಾಟವಾಡುವ ಹಾಗೂ ಸರ್ಕಾರದ ಈ ಹೊಣೆಗೇಡಿತನದ ವಿರುದ್ಧ ರಾಜ್ಯದ ಜನ ಸಿಡಿದೇಳುವ ಕಾಲ ದೂರವಿಲ್ಲ!’ವೆಂದು ಬಿಜೆಪಿ ಟೀಕಿಸಿದೆ.
‘ನೀಡಿರುವ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲೇ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸಲು ಸಿದ್ದರಾಮಯ್ಯರ #ATMSarkara ಸಂಪೂರ್ಣ ವಿಫಲವಾಗಿದೆ, ಪರಿಣಾಮವಾಗಿ ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಜನಿಕರು ಬೀದಿಗಿಳಿಯುತ್ತಿದ್ದಾರೆ. ಸರ್ಕಾರದ ವಿಫಲತೆಯನ್ನು ಮರೆಮಾಚಲು ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಅನೇಕ ಜನಪರ ಕಾನೂನುಗಳನ್ನು ರದ್ದುಗೊಳಿಸುತ್ತೇವೆ ಎಂದು ಕಾಂಗ್ರೆಸ್ನ ವಿವಿಧ ಸಚಿವರುಗಳು ಹೇಳುತ್ತಾ ವಿಷಯಾಂತರಕ್ಕೆ ಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ: 20 ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳನ್ನ ತಡೆ ಹಿಡಿಯುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
‘ವಿಷಯಾಂತರದಿಂದ ಯಾವುದೇ ಪ್ರಯೋಜನವಾಗದು, ಕೊಟ್ಟ ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸದೆ ಕಾಲಹರಣ ಮಾಡಿದಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಆಕ್ರೋಶ ಮತ್ತಷ್ಟು ತೀವ್ರವಾಗಲಿದೆ’ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.