ʼಸಿದ್ದರಾಮಯ್ಯ ಆಡಳಿತದಲ್ಲಿ 35,000 ಕೋಟಿ ರೂ. ದುರ್ಬಳಕೆʼ
2013-14ರಲ್ಲಿ ಟೆಂಡರ್ ಶ್ಯೂರ್ ಯೋಜನೆಗಳಲ್ಲಿ 53.86 ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿದ್ದರಾಮಯ್ಯ ಅವರು 50ರಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ ಮತ್ತು ಅವರ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ಹೊರತರಲಾಗುವುದೆಂದು ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರು : ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರೀಯ ಪಕ್ಷಗಳಾದ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಭ್ರಷ್ಟಾಚಾರದ ತೀವ್ರ ಜಗಳ ಮುಂದುವರಿದಿದೆ. ಬಿಜೆಪಿಯ ಭ್ರಷ್ಟಾಚಾರವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಬೆಂಗಳೂರಿನ 300 ಕ್ಕೂ ಹೆಚ್ಚು ಸ್ಥಳಗಳಲ್ಲಿ ʼಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿʼ ಎಂಬ ಮೌನ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಹಿನ್ನಲೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಗರು ವಾಗ್ದಾಳಿ ನಡೆಸಿದ್ದಾರೆ.
ಈ ಮಧ್ಯೆ, ಸಿದ್ದರಾಮಯ್ಯನವರು ಸಿಎಂ ಆಗಿದ್ದ ಅವಧಿಯಲ್ಲಿ ಟೆಂಡರ್ ಶ್ಯೂರ್ ಯೋಜನೆಗಳಲ್ಲಿ ಶೇ 50ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಸೋಮವಾರ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. 2013-14ರಲ್ಲಿ ಟೆಂಡರ್ ಶ್ಯೂರ್ ಯೋಜನೆಗಳಲ್ಲಿ 53.86 ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿದ್ದರಾಮಯ್ಯ ಅವರು 50ರಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ ಮತ್ತು ಅವರ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ಹೊರತರಲಾಗುವುದೆಂದು ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಅಲ್ಲದೆ, ಸಿದ್ದರಾಮಯ್ಯ ವಿರುದ್ಧ ಸುಮಾರು 65 ಪ್ರಕರಣಗಳಿವೆ ಈ ಪ್ರಕರಣಗಳಿಂದ ಪಾರಾಗಲು ಅವರು ಎಸಿಬಿಯನ್ನು ರಚಿಸಿದ್ದರು ಎಂದು ದೂರಿದ್ದಾರೆ.
ಇದನ್ನೂ ಓದಿ: ಸಂಸದೆ ಸುಮಲತಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಜಗಳ..!
ಇನ್ನು, ಸಿದ್ದರಾಮಯ್ಯ ಆಡಳಿತದಲ್ಲಿ ಹಲವು ಅಕ್ರಮಗಳಲ್ಲಿ ತೊಡಗಿದಲ್ಲದೆ, 35,000 ಕೋಟಿ ರೂಪಾಯಿ ದುರ್ಬಳಕೆಯಾಗಿದೆ ಎಂದು ಸಿಎಜಿ ಆಡಿಟ್ ವರದಿಯಲ್ಲಿ ಹೇಳಿದೆ. ಎಲ್ಲಾ ರಸ್ತೆ ಕಾಮಗಾರಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ವಿಪಕ್ಷ ನಾಯಕನ ವಿರುದ್ಧ ಕಿಡಿಕಾರಿದರು. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.