ದೆಹಲಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ತಮ್ಮ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನು ಭೇಟಿ ಮಾಡಿದ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ. ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
#WATCH "Not at all...," says Karnataka CM BS Yediyurappa on being asked if he has resigned pic.twitter.com/mQDSI7g8Pu
— ANI (@ANI) July 17, 2021
ಇದನ್ನೂ ಓದಿ: Heavy Rain in Karnataka : ರಾಜ್ಯದಲ್ಲಿ ಜು. 21ರವರೆಗೂ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ
ನಾಯಕತ್ವ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್‌ವೈ(BS Yediyurappa), ‘ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಈಗಾಗಲೇ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ಅಭಿವೃದ್ಧಿ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಮತ್ತೆ ನಾನು ದೆಹಲಿಗೆ ಬರುತ್ತೇನೆ. ನನ್ನ ಬಗ್ಗೆ ಪ್ರಧಾನಿಗಳು ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ(BJP) ಸರ್ಕಾರವನ್ನು ಅಧಿಕಾರಕ್ಕೆ ತರಲು ನಾನು ಶ್ರಮಿಸುತ್ತೇನೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ’ ಎಂದು ಹೇಳಿದ್ದಾರೆ.
We discussed in detail the development of the party in Karnataka. He has a very good opinion of me. I will work for the party to come back to power in the state again: Karnataka CM BS Yediyurappa on his meeting with BJP national president JP Nadda in Delhi pic.twitter.com/15NWRh2n6G
— ANI (@ANI) July 17, 2021
ಇದನ್ನೂ ಓದಿ: Karnataka High Court: ಪೋಷಕರ ಸಂಬಂಧ ಅಕ್ರಮವಾಗಿರಬಹುದು ಆದರೆ ಅವರಿಂದ ಹುಟ್ಟಿದ ಮಗು ಅಲ್ಲ: ರಾಜ್ಯ ಹೈಕೋರ್ಟ್
ಮೇಕೆದಾಟು ಯೋಜನೆಗೆ ಅನುಮತಿ ಪಡೆಯುತ್ತೇವೆ
‘ಮೇಕೆದಾಟು ಯೋಜನೆ(Mekedatu project) ಕರ್ನಾಟಕ ಮತ್ತು ತಮಿಳುನಾಡು ಜನರು ಅಣ್ಣ-ತಮ್ಮಂದಿರಂತೆ ಬದುಕಲು ಉತ್ತಮ ಅವಕಾಶ ನೀಡಿದೆ. ಈ ಮೇಕೆದಾಟು ಯೋಜನೆಗೆ ನಾವು ಅಗತ್ಯ ಅನುಮತಿಯನ್ನು ಪಡೆದುಕೊಳ್ಳುತ್ತೇವೆ. ಈ ಯೋಜನೆಯಿಂದ ಪಕ್ಕದ ರಾಜ್ಯಗಳಿಗೆ ನೂರಕ್ಕೆ ನೂರರಷ್ಟು ಯಾವುದೇ ತೊಂದರೆಯಾಗುವುದಿಲ್ಲ. ಈ ಯೋಜನೆಗೆ ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟ ಸಚಿವರೊಂದಗೆ ಮಾತನಾಡುತ್ತೇನೆ. ಇದರಲ್ಲಿ ಯಾವುದೇ ರೀತಿಯ ಗೊಂದಲಗಳು ಇಲ್ಲ. ಈ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಮತ್ತು ರಾಜನಾಥ್ ಸಿಂಗ್ ರನ್ನು ಭೇಟಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಅವರ ದೆಹಲಿ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಿರಿಕ್ ಮಾಡುತ್ತಿದ್ದ ವಿರೋಧಿಗಳಿಗೆ ಬಿಎಸ್‌ವೈ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.