Karnataka Budget 2021-22: ಇಂದು ಬಹುನಿರೀಕ್ಷಿತ ರಾಜ್ಯ ಬಜೆಟ್, ಎಲ್ಲರ ಚಿತ್ತ ಸಿಎಂ ಬಿಎಸ್ವೈರತ್ತ
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸುವುದಾಗಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ಬೆಂಗಳೂರು : ಬಹು ನಿರೀಕ್ಷೆಯ 2021-22 ನೇ ಸಾಲಿನ ರಾಜ್ಯ ಬಜೆಟ್ (Karnataka Budget 2021-22) ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು (BS Yediyurappa) ಇಂದು ಮಂಡನೆ ಮಾಡಲಿದ್ದಾರೆ . ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸಲಿದ್ದಾರೆ.
ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದ ಬಿ.ಎಸ್. ಯಡಿಯೂರಪ್ಪ (BS Yediyurappa)ನವರು ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದರು. 2020ರಲ್ಲಿ 7ನೇ ಬಾರಿಗೆ ಬಜೆಟ್ ಮಂಡಿಸಿದ್ದ ಬಿಎಸ್‌ವೈ ಇಂದು 8ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಆದರೆ ಈ ವರ್ಷ ಈ ಹಿಂದಿನಂತೆ ಇಲ್ಲ.
Bus Ticket: ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: BMTC ಟಿಕೆಟ್ ದರ ಏರಿಕೆ!
ರೈತ ನಾಯಕ ಎಂದೇ ಬಿಂಬಿತರಾಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ರೈತ (Farmers) ಸಮುದಾಯಕ್ಕೆ ಭಾರೀ ನಿರೀಕ್ಷೆ ಇದ್ದು ಈ ಬಾರಿಯ ಬಜೆಟ್ನಲ್ಲಿ ಕೃಷಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಯಾವ ಘೋಷಣೆ ಮಾಡಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲ ಇದೆ.
ಇದಲ್ಲದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಅವುಗಳ ಮೇಲಿನ ತೆರಿಗೆ ಇಳಿಸಿ ಪರಿಹಾರ ನೀಡುವರೇ ಎಂಬ ನಿರೀಕ್ಷೆ ದಟ್ಟವಾಗಿದೆ.
ಇದನ್ನೂ ಓದಿ - ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಇನ್ನು ಮಹಿಳಾ ವರ್ಗಕ್ಕೆ, ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಹೊಸ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ. ಇದಲ್ಲದೆ ಪ್ರವಾಸೋದ್ಯಮ, ಮನರಂಜರೆ, ರಿಯಲ್ ಎಸ್ಟೇಟ್ ಕ್ಷೇತ್ರಗಳಿಗೆ ಉತ್ತೇಜನ ನೀಡುವಂಥ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಒಟ್ಟಿನಲ್ಲಿ ಈ ಬಾರಿ ಬಜೆಟ್ ನಲ್ಲಿ ಆದಾಯ ಕೊರತೆ ಕಾಡುವ ಸಾಧ್ಯತೆಯಿದೆ ಎಂದು ಈಗಾಗಲೇ ಸುಳಿವು ನೀಡಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಜನರ ಮೇಲೆ ಹೆಚ್ಚಿನ ಹೊರೆ ಹಾಕದಂತೆ ಸರ್ಕಾರದ ಆದಾಯವನ್ನು ಹೆಚ್ಚಿಸಲು ಯಾವ ಕ್ಷೇತ್ರ ಕ್ಷೇತ್ರಗಳಿಗೆ ಎಷ್ಟು ಕೊಡುಗೆ ನೀಡಲಿದ್ದಾರೆ, ಯಾವ ಹೊಸ ಘೋಷಣೆ ಮಾಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.