ಬೆಂಗಳೂರು:  ಸಿಎಂ ಯಡಿಯೂರಪ್ಪ ನವರು ಇಂದಿನ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಮತ್ತು ರೈತರಿಗೆ ಭರಪೂರ ಯೋಜನೆಗಳನ್ನೇ ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೃಷಿ ಹಾಗೂ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಘೋಷಿಸಿರುವ ಯೋಜನೆಗಳ ಪಟ್ಟಿ ಇಲ್ಲಿದೆ


ಕೃಷಿ ಮತ್ತು ರೈತ :


√ ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ.


√ ಸಿಂಗೇನ ಅಗ್ರಹಾರದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ.
√ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್‌ ರಚನೆ.


√ ಬೈಯಪ್ಪನಹಳ್ಳಿಯಲ್ಲಿ ರೂ. 50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.
√ ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪನೆ.


√ ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ವ್ಯವಸ್ಥೆ.
√ ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ & ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ


ಇದನ್ನೂ ಓದಿ - Karnataka budget 2021: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ


√ ರೈತ ಉತ್ಪಾದಕ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕಾ ಉತ್ಪನ್ನಗಳಿಗೆ 'ಬ್ರಾಂಡ್ ವ್ಯಾಲ್ಯೂ' ಕಲ್ಪಿಸಲು, ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸಲು ಕ್ರಮ
√ ಆತ್ಮನಿರ್ಭರ ಭಾರತ ಅಭಿಯಾನದಡಿ, ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಆಹಾರ ಪಾರ್ಕ್ ಸ್ಥಾಪನೆ.


√ ಇತರ ಕಾರ್ಯಕ್ರಮಗಳಡಿ ನೀಡುವ ಶೇ. 35ರಷ್ಟು ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸಲು ಶೇ. 15ರಷ್ಟು ಹೆಚ್ಚುವರಿ ಸಹಾಯಧನ. ಇದಕ್ಕಾಗಿ ರೂ. 50 ಕೋಟಿ ಅನುದಾನ.
√ ಸಾವಯವ ಕೃಷಿ ಉತ್ತೇಜನಕ್ಕೆ ರೂ. 500 ಕೋಟಿ ವೆಚ್ಚದಲ್ಲಿ ಹೊಸ ಯೋಜನೆ ಜಾರಿ.


√ ಹೊಸ ಹೈಬ್ರಿಡ್‌ ಬೀಜ ನೀತಿ ಜಾರಿಗೆ ಕ್ರಮ.


√ ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ನಡೆಸಲುರೂ. 25 ಕೋಟಿ ಅನುದಾನ.


 


ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆಧ್ಯತೆ 


√ ಮಹಿಳೆಯರಿಗೆ ರೂ. 2 ಕೋಟಿವರೆಗೆ ಸಾಲ

√ ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ, 60 ಸಾವಿರ ಮಹಿಳೆಯರಿಗೆ ಉದ್ಯೋಗ


√ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್


√ ನಿರ್ಭಯಾ ಯೋಜನೆಯಡಿಯಲ್ಲಿ 7500 ಸಿಸಿ ಟಿವಿ ಕ್ಯಾಮರಾ ಅಳವಡಿಕೆ


√ ಮಹಿಳೆಯರಿಗೆ ಗೋದಾಮು, ಅಂಗಡಿ ನಿರ್ಮಾಣಕ್ಕೆ ಸಹಾಯ


√ ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರ ತೆರೆಯಲು ಅನುದಾನ


√ ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ


√ ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ


√ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಈ ಬಾರಿ ಯಾವುದೇ ತೆರಿಗೆ ವಿಧಿಸದಿರಲು ನಿರ್ಧಾರ


√ ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ


√ ಬಿಜೆಪಿ ಸರ್ಕಾರ #KarnatakaVikasaPatra2021‌ ಮೂಲಕ ಮಹಿಳೆಯರ ಸ್ವಾವಲಂಬನೆ & ಸಬಲೀಕರಣಕ್ಕೆ ಆದ್ಯತೆ ನೀಡಿದೆ.


√ ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ. 4ರ ರಿಯಾಯಿತಿ ಬಡ್ಡಿದರದಲ್ಲಿ ಮಹಿಳಾ ಅಭಿವೃದ್ಧಿ ನಿಗಮ/ ಕರ್ನಾಟಕ ರಾಜ್ಯ ಹಣಕಾಸು ನಿಗಮದಿಂದ 2 ಕೋಟಿ ವರೆಗೆ ಸಾಲ ಸೌಲಭ್ಯ.


√ ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕೆ ಆದ್ಯತೆ.


ಇದನ್ನೂ ಓದಿ - Karnataka Budget 2021: ಬಜೆಟ್ ನಿಂದ ನಿವೇಶನ ಜಾಗ ಖರೀದಿದಾರರಿಗೆ ಭರ್ಜರಿ ಸಿಹಿ ಸುದ್ದಿ..!


√ ಸಂಜೀವಿನಿ ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ 6 ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಬೆಂಬಲ.


√ 60 ಸಾವಿರ ಮಹಿಳೆಯರಿಗೆ ಅನುಕೂಲವಾಗಲಿದೆ.
√ ಮಹಿಳೆಯರ ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು. 


√ 2260 ಕಿರು ಉದ್ದಿಮೆಗಳ ಮೂಲಕ 25 ಸಾವಿರ ಮಹಿಳೆಯರಿಗೆ ಉತ್ತೇಜನ.
√ ಎಪಿಎಂಸಿಯಿಂದ ಪರವಾನಗಿ ಪಡೆದ ಮಹಿಳೆಯರಿಗೆ ಪ್ರಾಂಗಣದಲ್ಲಿನ ನಿವೇಶನ, ಗೋದಾಮು, ಅಂಗಡಿ ಹಂಚಿಕೆಯಲ್ಲಿ ಶೇ. 10ರಷ್ಟು ಮೀಸಲಾತಿ.


√ ಮಹಿಳಾ ವಾಣಿಜ್ಯೋದ್ಯಮಿಗಳನ್ನು ಬೆಂಬಲಿಸಲು ರೂ. 5 ಕೋಟಿ ವೆಚ್ಚದಲ್ಲಿ Women Entrepreneurship ಕಾರ್ಯಕ್ರಮ ಜಾರಿ.


√ ಸ್ವ-ಸಹಾಯ ಗುಂಪುಗಳು & ಅವುಗಳ ಒಕ್ಕೂಟವನ್ನು ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ


√ ಸ್ವ ಸಹಾಯ ಗುಂಪುಗಳನ್ನು ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರಲು ಕ್ರಮ


√ ಮಹಿಳಾ ಆಯವ್ಯಯ & ಮಕ್ಕಳ ಆಯವ್ಯಯ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಳವಡಿಕೆ


√ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್ & ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ


√ ಸಿಎಂ ನೇರ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ & ಸಬಲೀಕರಣ ಅಭಿಯಾನಕ್ಕೆ ಚಾಲನೆ


√ ಜಿಲ್ಲಾ ಕೇಂದ್ರಗಳಲ್ಲಿ 2 ಸರ್ಕಾರಿ ಕಚೇರಿಗಳಲ್ಲಿ ಶಿಶು ಪಾಲನಾ ಕೇಂದ್ರ ತೆರೆಯಲು ಕ್ರಮ


√ ಮಹಿಳಾ ಸರ್ಕಾರಿ ನೌಕರರಿಗೆ 6 ತಿಂಗಳ ಮಕ್ಕಳ ಆರೈಕೆ ರಜೆ


√ ಮಹಿಳಾ ಗಾರ್ಮೆಂಟ್‌ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್‌ ಪಾಸ್‌ ವಿತರಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.