ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಅನಿಶ್ಚಿತತೆ, ಪ್ರತಿಪಕ್ಷ ಕಾಂಗ್ರೆಸಿನ ಪ್ರಖರತೆ ಹಾಗೂ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಳನ್ನು (Assembly Elections) ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಮತೋಲನದ ಬಜೆಟ್ (Balancing Budget) ಮಂಡಿಸುವುದು ಸವಾಲಿನ ಕೆಲಸವಾಗಿದೆ. ಇದರ ನಡುವೆ ಕೋವಿಡ್, ಆರ್ಥಿಕ ಹಿಂಜರಿತ, ವ್ಯಾಪರ-ವಹಿವಾಟುಗಳ ಕುಂಠಿತ, ಬೆಲೆ ಏರಿಕೆ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಜನ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಅಪಾರ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ.
ಉತ್ತರ ಕರ್ನಾಟಕಕ್ಕೆ ಹಲವು ಕೊಡುಗೆ ಸಾಧ್ಯತೆ:
ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಸಿಎಂ ಸ್ಥಾನ ನೀಡುವಾಗ ಅವರು ಉತ್ತರ ಕರ್ನಾಟಕದವರು ಎಂಬುದನ್ನೂ ಪರಿಗಣಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಮಂಡಿಸುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನೀಡುವ ನಿರೀಕ್ಷೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ನಡೆಯುತ್ತಿದ್ದು ಅವುಗಳಿಗೆ ಬಜೆಟ್‌ನಲ್ಲಿ ಅಗತ್ಯ ಹಣ ನೀಡುವ ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ವಿಶೇಷ ಗಮನಹರಿಸುವ ನಿರೀಕ್ಷೆಯೂ ಇದೆ.
ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಘೋಷಣೆ ಸಾಧ್ಯತೆ:
ಬಿಬಿಎಂಪಿ ಚುನಾವಣೆ (BBMP Elections) ಬರುತ್ತಿದೆ ಮತ್ತು ಬಸವರಾಜ ಬೊಮ್ಮಾಯಿಯವರ ಬಳಿಯಲ್ಲೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಇದೆ. ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 198 ರಿಂದ 243ಕ್ಕೆ ಏರಿಕೆ ಆಗಲಿದೆ. ಹೊಸದಾಗಿ ಬಿಬಿಎಂಲಿ ವ್ಯಾಪ್ತಿಗೆ ಸೇರುವ ಹಳ್ಳಿಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೊಡಲೇಬೇಕಾಗಿದೆ. ಆದುದರಿಂದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡುವ ನಿರೀಕ್ಷೆ ಇದೆ.
ಇದನ್ನೂ ಓದಿ- ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ.. ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಭರವಸೆ
ಬೊಮ್ಮಾಯಿ ಬಜೆಟ್‌ನಲ್ಲಿ ಹಲವು ನಿರೀಕ್ಷೆಗಳು:
ಬಿಪಿಎಲ್ ಪಡಿತರ ಕಾರ್ಡ್‌ದಾರರಿಗೆ (BPL Ration Card) 5 ಕೆ.ಜಿ. ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆ.ಜಿ ಅಕ್ಕಿ/ಧಾನ್ಯ ನೀಡಲಿದ್ದಾರೆ ಎಂಬ ನಿರೀಕ್ಷೆ ಇದೆ.
ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ (Assembly Elections) ನಡೆಯಲಿದ್ದು ಸರ್ಕಾರಿ ನೌಕರರನ್ನು ಒಲಿಸಿಕೊಳ್ಳಲು 7ನೇ ವೇತನ ಆಯೋಗ ರಚನೆ ಮಾಡುವ ಘೋಷಣೆ ನಿರೀಕ್ಷೆ ಇದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜನಪ್ರಿಯವಾಗಲು ಕಾರಣವಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ರಾಜ್ಯದಲದಲೂ ಘೋಷಿಸುವ ನಿರೀಕ್ಷೆ ಇದೆ.
ಬಸವರಾಜ ಬೊಮ್ಮಾಯಿ (Basavaraja Bommai) ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದರು. ನೀರಾವರಿ ಅವರ ಆಸಕ್ತಿಯ ಕ್ಷೇತ್ರ. ಹಾಗಾಗಿ ತಮ್ಮ ಬಜೆಟ್‌ನಲ್ಲಿ ನೀರಾವರಿಗೆ ಹೆಚ್ಚು ಒತ್ತು ಕೊಡಬಹುದು ಎಂಬ ನಿರೀಕ್ಷೆ ಇದೆ.
ಇದನ್ನೂ ಓದಿ- Basavaraj Dindur : 'ರಾಜ್ಯದಲ್ಲಿ ತಲೆ ಎತ್ತಲಿವೆ ಪಂಚಮಸಾಲಿ ಸಮಾಜದ ಒಟ್ಟು ಹತ್ತು ಪೀಠಗಳು'
ಸದ್ಯ ಸರ್ಕಾರದ ವರ್ಚಸ್ಸು ಕಾಪಾಡಿಕೊಳ್ಳಬೇಕಾದರೆ ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ, ಉದ್ಯೋಗಸೃಷ್ಠಿಗೆ ಒತ್ತು ನೀಡಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಯೋಜನೆಗಳು ಘೋಷಣೆ ಆಗಬಹುದು ಎಂಬ ನಿರೀಕ್ಷೆ ಇದೆ.
ಜನ ಬೆಲ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯೇ ಮೂಲ ಕಾರಣವಾಗಿದೆ. ಆದುದರಿಂದ ಪೆಟ್ರೋಲ್ ಮತ್ತು ಡೀಸಲ್ ಮೇಲೆ ಸೆಸ್ ಕಡಿತ ಮಾಡುವ ನಿರೀಕ್ಷೆ ಇದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.