ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಫೆಬ್ರವರಿ 17ಕ್ಕೆ) ಆಯವ್ಯಯ ಮಂಡನೆ ಜೊತೆಗೆ ಲೇಖಾನುದಾನ ಮಂಡನೆ ಮಾಡಲಿದ್ದಾರೆ. ಈ ಬಾರಿ  ₹3 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣಾ ಹೊಸ್ತಿಲಿನಲ್ಲಿ ಬಜೆಟ್ ಮಂಡನೆ ಆಗುತ್ತಿರುವುದರಿಂದ ಬಜೆಟ್ ಬಗ್ಗೆ ಎಲ್ಲರಿಗೂ ಕೂಡ ಕೊಂಚ ಹೆಚ್ಚಿನ ನಿರೀಕ್ಷೆಯಿದೆ. ಹಾಗಾದ್ರೆ ಬಜೆಟ್ ನಿರೀಕ್ಷೆ ಏನಿದೆ?


COMMERCIAL BREAK
SCROLL TO CONTINUE READING

ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಚುನಾವಣಾ ಹೊಸ್ತಿಲಲ್ಲಿ ಭಾರಿ ಪ್ರಮಾಣದಲ್ಲಿ ಘೋಷಣೆಗಳು ಇರಲಿದೆ ಎಂದು ನಿರೀಕ್ಷೆ ಇದೆ. ಇದರ ಜೊತೆಗೆ ಈ ಭಾರಿ ತೆರಿಗೆ ಹೊರೆ ಇಲ್ಲದೆ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೂಡ ಹೇಳಲಾಗುತ್ತಿದೆ. 


ಮುಖ್ಯಮಂತ್ರಿ ಬೊಮ್ಮಾಯಿ ಅವರ ಅಧಿಕಾರವಧಿಯ ಎರಡನೇ ಬಜೆಟ್ ಮಂಡನೆ ಮಾಡಲಿದ್ದಾರೆ.  ನಾಳೆ ಬೆಳಗ್ಗೆ 10.15ಕ್ಕೆ ಸಿಎಂ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಘೋಷಣೆ ಪ್ರಕ್ರಿಯೆ ಪ್ರಾರಂಭ ಆಗಲಿದೆ. 2022-23 ಸಾಲಿನಲ್ಲಿ 2.7 ಲಕ್ಷ ಕೋಟಿ ಆಯವ್ಯಯ ಮಂಡಿಸಿದ್ದ ಸಿಎಂ ಬೊಮ್ಮಾಯಿ ಈ ಬಾರಿ 3 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದಾರೆ.


2023ರ ಏಪ್ರಿಲ್ - ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಜನರ ಮತ ಸೆಳೆಯಲು ಜನಪ್ರಿಯ ಘೋಷಣೆ ಮಾಡಲು ಈಗಾಗಲೇ ಅಧಿಕಾರಿಗಳ ಜೊತೆ ಸರಣಿ ಸಭೆಗಳನ್ನು ಸಿಎಂ ನಡೆಸಿದ್ದಾರೆ. ಇದರ ಜೊತೆಗೆ ಈ ಬಾರಿ ಗುರಿ ಮೀರಿದ ಆದಾಯ ಸಂಗ್ರಹ ಆಗುತ್ತಿದೆ, ಈ ಹಿನ್ನಲೆಯಲ್ಲಿ ಹೊರೆ ಇಲ್ಲದ ಚುನಾವಣೆ ಬಜೆಟ್ ಮಂಡನೆ ಆಗುವ ಎಲ್ಲಾ ಸಾಧ್ಯತೆ ಇದೆ.


ಇದನ್ನೂ ಓದಿ- Karnataka Budget 2023 : ಎಷ್ಟಿರಲಿದೆ ಈ ಬಾರಿಯ ರಾಜ್ಯ ಬಜೆಟ್ ಗಾತ್ರ?


ಕಳೆದ ವರ್ಷ ರಾಜ್ಯದ ಬೊಕ್ಕಸಕ್ಕೆ ₹5 ಸಾವಿರ ಕೋಟಿ ಆದಾಯ ಕೊರತೆಯಿತ್ತು. ಈ ಬಾರಿ ಈವರೆಗೆ ಬಜೆಟ್ ಗುರಿಗಿಂತ 13 ಸಾವಿರ ಕೋಟಿ ಅಧಿಕವಾಗಿ ಆದಾಯ ಸಂಗ್ರಹ ಮಾಡಲಾಗಿದೆ.‌ 2022-23 ಸಾಲಿನಲ್ಲಿ ಒಟ್ಟು ₹1,89,887.54 ಕೋಟಿ ರಾಜಸ್ವ ಜಮೆಯ ಅಂದಾಜು ಮಾಡಲಾಗಿದೆ. ಹಣಕಾಸಿನ ಸಂಗ್ರಹ ಉತ್ತಮವಾಗಿದ್ದು ಪರಿಷ್ಕೃತ ರಾಜಸ್ವ ಜಮೆ ಅಂದಾಜು ಮಾರ್ಚ್ ಅಂತ್ಯಕ್ಕೆ ಗುರಿ ಮೀರಲಿದೆ. ಹೀಗಾಗಿ ಈ ವರ್ಷ ₹65,000-70,000 ಕೋಟಿ.


ಚುನಾವಣಾ ಹೊಸ್ತಿಲಲ್ಲಿ ಸರ್ಕಾರ: ಜನಪ್ರಿಯ ಘೋಷಣೆ ನಿರೀಕ್ಷೆ! 
ಈ ಬಾರಿಯ ಬಜೆಟ್ ನಲ್ಲಿ ಬಡವರಿಗೆ, ಮಹಿಳೆಯರಿಗೆ ಹಾಗೂ ರೈತರಿಗೆ ಹೊಸ ಯೋಜನೆಗಳನ್ನು ಘೋಷಿಸಲು ಸಿಎಂ ಬೊಮ್ಮಾಯಿ‌ ತಯಾರಿ ನಡೆಸುತ್ತಿದ್ದಾರೆ. 


ಕುಲಕಸುಬು ಮಾಡಲು ಇಚ್ಚಿಸುವವರಿಗೆ ₹50,000 ಆರ್ಥಿಕ ಸಹಾಯ ನೀಡಲು  ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ. ಇದರ ಮೂಲಕ ಗ್ರಾಮೀಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆ ರೂಪಿಸಲಿದ್ದಾರೆ ಎನ್ನಲಾಗಿದೆ. 


ಇದಲ್ಲದೆ, ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ. ರೈತರು, ಕಾರ್ಮಿಕರು, ಮಹಿಳೆಯರು ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಜನಪ್ರಿಯ ಯೋಜನೆ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ‌. 


ಇದನ್ನೂ ಓದಿ- Karnataka Budget 2023: ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಬಂಪರ್‌.. ಗೌರವಧನ ಹೆಚ್ಚಳದ ಭರವಸೆ.!!


ಸ್ತ್ರೀ ಶಕ್ತಿ ವಿಶೇಷ ಯೋಜನೆ:
ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ರೂಪಿಸುತ್ತಿದ್ದು, ಒಂದು ಕುಟುಂಬದ ಮಹಿಳೆಗೆ ಕನಿಷ್ಠ ಮನೆ  ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಯೋಜನೆಯನ್ನು ಆಯವ್ಯಯದಲ್ಲಿ ಘೋಷಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ.


ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್  ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಘೋಷಿಸಲಿದ್ದಾರೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು ₹1,000, ₹1,500, ₹2,000 ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ವಿಶೇಷ ಆರ್ಥಿಕ ಸಹಾಯ ನೀಡುವ ಯೋಜನೆಯನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.


ರೈತರಿಗೆ ಬಂಪರ್ ಕೊಡುಗೆ!
ಚುನಾವಣೆ ಹೊಸ್ತಿಲಲ್ಲಿ ಸಿಎಂ ಬೊಮ್ಮಾಯಿ‌ ರೈತರನ್ನು ಕೇಂದ್ರೀಕರಿಸಿ ಹೊಸ ಯೋಜನೆಗಳನ್ನು ಘೋಷಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ರೈತರ ಪರವಾಗಿ ಈ ಬಾರಿ ವಿಶೇಷ ಬಜೆಟ್ ಇರಲಿದೆ. ಕೃಷಿಗೆ ಪೂರಕವಾಗಿರುವ ಇತರೆ ಕಸುಬುದಾರರಿಗೆ ಕಾಯಕ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


ರೈತರಿಗೆ ಡೀಸೆಲ್ ಸಹಾಯಧನ ವಿಸ್ತರಿಸುವ ಘೋಷಣೆಯನ್ನು ಈ ಬಾರಿಯ ಬಜೆಟ್ ನಲ್ಲಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. ರೈತರ ಅನಿಶ್ಚಿತತೆಯ ಬದುಕಿಗೆ ನಿಶ್ಚಿತತೆಯನ್ನು ತಂದುಕೊಡುವ ಕಾರ್ಯಕ್ರಮಗಳನ್ನು ಘೋಷಿಸಲಿದ್ದಾರೆ ಎನ್ನಲಾಗಿದೆ. ಸಮಗ್ರ ಗ್ರಾಮೀಣ ಕೃಷಿ ಆಧಾರಿತ ವ್ಯವಸಾಯಕ್ಕೆ ಗ್ರಾಮೀಣ ಸಾಲ ವ್ಯವಸ್ಥೆ ಬಸಲಾಯಿಸುವ ಹೊಸ ಯೋಜನೆ ರೂಪಿಸಲಿದ್ದಾರೆ. ಇದರ ಜೊತೆಗೆ ರೈತರ ಸಾಲದ ಮಿತಿಯನ್ನು ಹೆಚ್ಚಿಸುವ ಯೋಜನೆ ಸಹಿತ ಬಡ್ಡಿ ರಹಿತ ಸಾಲದ ಘೋಷಣೆ ಮಾಡಲಿದ್ದಾರೆ ಎಂದು ಅಂದಾಜಿಸಲಾಗಿದೆ.


ಇದನ್ನೂ ಓದಿ- ನಾನು ಸದಾ ರಿಲವೆಂಟ್ ರಾಜಕಾರಣಿ:ಸದನದಲ್ಲಿ ಸಿದ್ದು ಗುಡುಗು!


ಹೊಸ ಕೃಷಿ ನೀತಿ ಘೋಷಣೆ ಸಾಧ್ಯತೆ:
ಸಿಎಂ ಬೊಮ್ಮಾಯಿ ಈ ಬಾರಿ ತಮ್ಮ ಆಯವ್ಯದಲ್ಲಿ ಹೊಸ ಕೃಷಿ ನೀತಿ ಘೋಷಿಸುವ ಸಾಧ್ಯತೆ ಇದೆ. ನೈಸರ್ಗಿಕ ಕೃಷಿ ಕೇಂದ್ರೀಕೃತ ಮಣ್ಣಿನ ಫಲವತ್ತತೆ ವೃದ್ಧಿಸುವ ನೀತಿ ಇದಾಗಿರಲಿದೆ ಎಂದು ಹೇಳಲಾಗಿದೆ.


ರಾಸಾಯನಿಕ ಬಳಕೆಯಿಂದ ಮಣ್ಣಿನ ಫಲವತ್ತತೆ, ಗುಣಮಟ್ಟ ಕುಸಿದಿದ್ದು, ಅದರ ನಿಯಂತ್ರಣದೊಂದಿಗೆ ನೈಸರ್ಗಿಕ ಕೃಷಿಗೆ ಒತ್ತು ನೀಡುವ ಕೃಷಿ ನೀತಿ ಘೋಷಿಸುವ ಸಾಧ್ಯತೆ ಇದೆ.‌ ಆ ಮೂಲಕ ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲು ಉತ್ತೇಜಿಸುವ ಯೋಜನೆ ಘೋಷಿಸುವ ಸಾಧ್ಯತೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.


ಬೊಮ್ಮಾಯಿ ಬಜೆಟ್ ಸಪ್ರೈಸ್ ಏನಿರಲಿದೆ?:


- 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ ಸಾಧ್ಯತೆ


- ಅಡಿಕೆ ರೋಗ ತಡೆಯುವಿಕೆಗೆ ಬಜೆಟ್ ನಲ್ಲಿ ವಿಶೇಷ ಅನುದಾನ


- ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಸಾಧ್ಯತೆ


- ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯಲ್ಲಿ ಅದ್ಬುತ ಸ್ಮಾರಕ ಸ್ಥಾಪನೆ


- ಬೆಂಗಳೂರು ನಗರದಲ್ಲಿ ಸಮಗ್ರವಾಗಿ ರಾಜಕಾಲುವೆ ಪುನರ್ನಿಮಾಣ ಮಾಡಲು ಐಐಎಸ್ ಸಿ ಸೇರಿದಂತೆ ಇತರೆ ವರದಿಗಳನ್ನು ಆಧರಿಸಿ ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯನ್ನು ಸುಧಾರಣೆಗಾಗಿ ವಿಶೇಷವಾದ ಮಾಸ್ಟರ್ ಪ್ಲಾನ್ 


- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಬಜೆಟ್ ನಲ್ಲಿ ಅನುದಾನ. ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳ ಸಾಧ್ಯತೆ  


- ವೃತ್ತಿ ಆಧಾರಿತವಾದ ಕುಲಕಸುಬುಗಳ ಕಾರ್ಮಿಕರಿಗೆ ವಿಶೇಷ ಕಾರ್ಯಕ್ರಮ 


- ಕೃಷಿ ಇನ್ನಷ್ಟು ಉತ್ತಮಗೊಳ್ಳಲು ಸಣ್ಣ ಸಣ್ಣ ರೈತರ ಮಟ್ಟಿಗೆ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಪದ್ದತಿಯ ಗೋದಾಮುಗಳ ನಿರ್ಮಾಣ 


-ಆಯವ್ಯಯದಲ್ಲಿ ವಿಕಲಚೇತನರಿಗೆ ವಿವಿಧ ಕಾರ್ಯಕ್ರಮಗಳ ಘೋಷಣೆ


-ವಿವಿಧ ಸಮುದಾಯಗಳಿಗೆ ಸಮುದಾಯ ಭವನ ನಿರ್ಮಾಣ


- ಕರಾವಳಿ ಭಾಗದ ಚಟುವಟಿಕೆ, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮ ಘೋಷಣೆ 


- ಬೆಂಗಳೂರು ಮೂಲಭೂತಸೌಕರ್ಯ ಅಭಿವೃದ್ಧಿಗಾಗಿ ಬಂಪರ್ ಕೊಡುಗೆ ಸಾಧ್ಯತೆ


- ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಹಣಕಾಸಿನ ನೆರವು ಸಾಧ್ಯತೆ


- ನೇಕಾರರಿಗೆ ಇನ್ನಷ್ಟು ಬೆಂಬಲ ನೀಡಲು, ಕಚ್ಚಾ ವಸ್ತುವಿನಿಂದ ಹಿಡಿದು, ತಂತ್ರಜ್ಞಾನ ಅಭಿವೃದ್ಧಿಯವರಿಗೆ ಸಹಾಯ 


- ಎಲ್ಲಾ ಸಮಾಜದ ಮಠ, ದಲಿತ ಮಠ, ಹಿಂದುಳಿದ ವರ್ಗಗಳ ಮಠಗಳಿಗೆ ಹೆಚ್ಚಿನ ಅನುದಾನ


-ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ಘೋಷಣೆ


- ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಯೋಜನೆ, ಏತ ನೀರವಾರಿಗಳಿಗೆ ಹೆಚ್ಚಿನ ಅನುದಾನ ಘೋಷಣೆ


- ವಿದ್ಯುತ್ ವಾಹನ ಖರೀದಿದಾರರಿಗೆ ತೆರಿಗೆ ವಿನಾಯಿತಿ, ಸಾರಿಗೆ ಇಲಾಖೆಗೆ ವಿದ್ಯುತ್ ಚಾಲಿತ ಬಸ್ ಗಳ ಖರೀದಿಗೆ ಅನುದಾನ ಘೋಷಿಸುವ ಸಾಧ್ಯತೆ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.