Karnataka Budget 2023 : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ

Karnataka Budget 2023 : ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 60 ಕೋಟಿ ಅನುದಾನ  ನೀಡಲಾಗಿದೆ. 

Written by - Ranjitha R K | Last Updated : Jul 7, 2023, 01:24 PM IST
  • ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಿದ ಕೊಡುಗೆ
  • ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮುಂದುವರಿಕೆ
Karnataka Budget 2023 : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ  title=

ಬೆಂಗಳೂರು : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಅದರಲ್ಲೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಲವು ಯೋಜನ್ಗೆಳನ್ನು ಜಾರಿಗೊಳಿಸಲಾಗಿದೆ. ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 60 ಕೋಟಿ ಅನುದಾನ  ನೀಡಲಾಗಿದೆ. 

ಅಲ್ಪಸಂಖ್ಯಾತ  ವಿದ್ಯಾರ್ಥಿಗಳಿಗೆ ನೀಡಿದ ಕೊಡುಗೆ : 
-ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ 
- ಐದು ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ  ಸ್ಥಾಪನೆ 
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ 
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ  ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ

ಇದನ್ನೂ ಓದಿ : Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?

ಇತರ ಯೋಜನೆಗಳು : 
- ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷೀಣ ಕನ್ನಡ ಜಿಲ್ಲೆಗಳಲ್ಲಿ, ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭ
- ಸ್ವಾವಲಂಬಿ ಸಾರಥಿ ಯೋಜನೆ ಅಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ 4 ಚಕ್ರ ವಾಹನ  ಖರೀದಿಸಲು  3‌ಲಕ್ಷ ರೂ. ಸಹಾಯಧನ  
- ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100ಕೋಟಿ ಅನುದಾನ
- ಹಜ್ ಭವನದಲ್ಲಿ‌ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐ ಎ ಎಸ್,ಕೆ ಎ ಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭ
- ಹಲಸೂರಿನಲ್ಲಿರುವ ಗುರುದ್ವಾರ ದ ಅಭಿವೃದ್ಧಿ ಗೆ 25 ಕೋಟಿ ಅನುದಾನ

ಇದನ್ನೂ ಓದಿ :  ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News